February 22, 2026

Newsnap Kannada

The World at your finger tips!

aap

ಆ್ಯಪ್‍ನ ಮೂಲಕ ಮಹಿಳೆಯರ ಮಾರಾಟ – ಬೆಂಗಳೂರಿನ 21 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ವಶಕ್ಕೆ

Spread the love

ಮುಂಬೈನ ಬುಲ್ಲಿ ಬೈ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಬೆಂಗಳೂರಿನ 21 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಆ್ಯಪ್ ಮುಸ್ಲಿಂ ಮಹಿಳೆಯರನ್ನು ಗುರಿಯಾಗಿಸಿ, ಅವರನ್ನು ಅಶ್ಲೀಲವಾಗಿ ಚಿತ್ರಿಸಿ ಹರಾಜು ಹಾಕಲಾಗುತ್ತಿತ್ತು. ಅದಕ್ಕೆ ಈ ಆ್ಯಪ್ ವಿರುದ್ಧ ಎಲ್ಲ ಕಡೆಯಿಂದ ತೀವ್ರ ವಿರೋಧ ವ್ಯಕ್ತವಾದ ಬಳಿಕ ಕೇಂದ್ರ ಸರ್ಕಾರ ಆ್ಯಪ್ ಅನ್ನು ನಿಷೇಧಿಸಿತ್ತು.

ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸರು ಬೆಂಗಳೂರಿನ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ವಶಕ್ಕೆ ಪಡೆದಿದ್ದಾರೆ.

ಪೊಲೀಸರು ಇಲ್ಲಿಯವರೆಗೂ ವಶಕ್ಕೆ ಪಡೆದುಕೊಂಡಿರುವ ಶಂಕಿತ ವ್ಯಕ್ತಿಯ ವಯಸ್ಸನ್ನು ಹೊರತುಪಡಿಸಿ, ಆ ವ್ಯಕ್ತಿಯ ಯಾವ ಗುರುತನ್ನು ಬಹಿರಂಗಪಡಿಸಿಲ್ಲ.

ಪೊಲೀಸರು ಈ ಅಪರಿಚಿತ ಆರೋಪಿಗಳ ವಿರುದ್ಧ ಐಪಿಸಿ ಮತ್ತು ಐಟಿ ಕಾಯ್ದೆಗೆ ಸಂಬಂಧಿಸಿದಂತೆ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

error: Content is protected !!