ಕಲ್ಲು ಬಂಡೆಗಳನ್ನು ನುಂಗಿ, ಮಣ್ಣು ಬಗೆದು ಪರರಿಗೆ ಬಿಕರಿ ಮಾಡಿಕೊಂಡು ಕೋಟೆ ಕೊತ್ತಲಗಳನ್ನು ಕಟ್ಟಿಕೊಂಡು ಮೆರೆಯುತ್ತಿರುವ ʼಡಿಸೈನ್ ವೀರರಿಗೆʼ ನಮ್ಮ ನೆಲ, ನಮ್ಮ ಜಲ ಎನ್ನುವುದು ಈಗ ನೆನಪಿಗೆ ಬಂದಿದೆ. ಅಭದ್ರತೆ ಅಡಿಪಾಯವನ್ನೇ ಅಲ್ಲಾಡಿಸುತ್ತಿದೆ! ಅಲ್ಲವೇ? ಎಂದು ಹೇಳುವ ಮೂಲಕ ಡಿಕೆ ಸಹೋದರರ ವಿರುದ್ಧ ಮಾಜಿ ಸಿಎಂ ಕುಮಾರ ಸ್ವಾಮಿ ಟ್ವಿಟ್ ನಲ್ಲಿ ಹಿಗ್ಗಾ ಮುಗ್ಗಾ ಕಿಡಿಕಾರಿದ್ದಾರೆ.
ಸಾರ್ವಜನಿಕ ಕಾರ್ಯಕ್ರಮದ ವೇದಿಕೆ ಮೇಲೆ ಸಂಸದ ಡಿ.ಕೆ.ಸುರೇಶ್ ಹಾಗೂ ಸಚಿವ ಡಾ.ಅಶ್ವಥ್ ನಾರಾಯಣ್ ನಡುವೆ ನಡೆದ ಜಟಾಪಟಿಗೆ ಸಂಬಂಧಿಸಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
ಕನಕಪುರ, ರಾಮನಗರ ಯಾರೋಬ್ಬರ ಸ್ವತ್ತಲ್ಲ. ಈ ನೆಲದ ಮಕ್ಕಳು ಎಂದು ಬಡಾಯಿ ಬಿಡುವ ಸಹೋದರರು ಇದೇ ನೆಲವನ್ನು ಹೇಗೆಲ್ಲಾ ನುಂಗಿ ನೀರು ಕುಡಿಯುತ್ತಿದ್ದಾರೆ ಎಂಬುದು ನನಗಿಂತ ಇಲ್ಲಿನ ಜನರಿಗೇ ಚೆನ್ನಾಗಿ ಗೊತ್ತಿದೆ. ಆಟ ಎಂದ ಮೇಲೆ ಅಂತ್ಯವೂ ಇರಬೇಕಲ್ಲವೇ? ಆ ಕ್ಷಣ ಹತ್ತಿರ ಬಂದಿದೆಯೇನೋ ಎಂದು ಮತ್ತೊಂದು ಟ್ವೀಟ್ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾವು ಹಾಸನದಿಂದ ಬಂದಿದ್ದೇವೆ, ನಿಜ. ಇಲ್ಲಿನ ಜನ ನಮ್ಮನ್ನು ಮನೆ ಮಕ್ಕಳೆಂದು ಭಾವಿಸಿದ್ದಾರೆ. ನಾವೂ ಹಾಗೆಯೇ ನಡೆದುಕೊಂಡಿದ್ದೇವೆ. ಜನರ ಪ್ರೀತಿ, ಅಭಿಮಾನ, ನಮ್ಮ ದುಡಿಮೆ ಫಲವಾಗಿ ಜಿಲ್ಲೆಯಲ್ಲಿ ರಾಜಕೀಯ ಮಾಡುತ್ತಿದ್ದೇವೆ. ಜನರೇ ನಮಗೆ ಅಧಿಕಾರ ನೀಡಿದ್ದಾರೆ.
ಹರದನಹಳ್ಳಿ ನನ್ನ ಜನ್ಮಸ್ಥಳ. ಬಿಡದಿ ನನ್ನ ಕರ್ಮಸ್ಥಳ. ಇದುವೇ ನನ್ನ ಪಾಲಿನ ಧರ್ಮಸ್ಥಳ. ಈ ಮಣ್ಣಲ್ಲಿಯೇ ನಾನು ಮಣ್ಣಾಗುವೆ ಎಂದು ಈಗಾಗಲೇ ಹೇಳಿದ್ದೇನೆ. ಇದರ ಹೊರತಾಗಿ ರಾಮನಗರಕ್ಕೆ ರಿಯಲ್ ಎಸ್ಟೇಟ್ ಮಾಡಲಿಕ್ಕೆ ನಾನು ಬಂದವನಲ್ಲ ಎಂದಿದ್ದಾರೆ.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
- ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
- 104ರನ್ಗೆ ಆಸ್ಟ್ರೇಲಿಯಾ ಆಲೌಟ್ ,ಬುಮ್ರಾಗೆ 5 ವಿಕೆಟ್
More Stories
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ʻಉಪಚುನಾವಣೆಯ ನಂತರ ಗೃಹ ಲಕ್ಷ್ಮಿ ಯೋಜನೆ ನಿಲ್ಲಿಸುತ್ತಾರೆʼ: ಎಚ್.ಡಿ.ಡಿ ಆರೋಪ
ಚನ್ನಪಟ್ಟಣ ಉಪಚುನಾವಣೆ: ನಿಖಿಲ್ ಕುಮಾರಸ್ವಾಮಿ ಪರ ಪತ್ನಿ ರೇವತಿ ಪ್ರಚಾರದಲ್ಲಿ ಸಕ್ರಿಯ