February 27, 2026

Newsnap Kannada

The World at your finger tips!

ravat

ಬಿಪಿನ್‌ ರಾವತ್‌ ಇದ್ದ ಹೆಲಿಕಾಪ್ಟರ್‌ ದುರಂತಕ್ಕೆ ಪೈಲಟ್‌ ದೋಷವೇ ಕಾರಣ

Spread the love

ಸೇನಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಜನರಲ್‌ ಬಿಪಿನ್‌ ರಾವತ್‌ ಅವರಿದ್ದ ಹೆಲಿಕಾಪ್ಟರ್‌ ದುರಂತಕ್ಕೆ ಪೈಲಟ್‌ ದೋಷವೇ ಕಾರಣ ಎಂದು ಮೂಲಗಳು ತಿಳಿಸಿವೆ.

ಡಿ 8 ರಂದು ತಮಿಳುನಾಡಿನ ಕೂನೂರು ಬಳಿ ರಷ್ಯಾ ಮೂಲದ ಎಂಐ-17ವಿ5 ಹೆಲಿಕಾಪ್ಟರ್‌ ಪತನಗೊಂಡಿತ್ತು.

ಸೇನಾ ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದ ಸಿಡಿಎಸ್‌‌ ಬಿಪಿನ್‌ ರಾವತ್‌, ಪತ್ನಿ ಮಧುಲಿಕಾ ಸೇರಿದಂತೆ 12 ಮಂದಿ ದುರಂತದಲ್ಲಿ ಸಾವನ್ನಪ್ಪಿದ್ದರು.

ಪೈಲಟ್‌ನ ಸಂಪೂರ್ಣ ನಿಯಂತ್ರಣದಲ್ಲಿರುವಾಗ ಹೆಲಿಕಾಪ್ಟರ್‌ ಅಜಾಗರೂಕತೆಯಿಂದ ಭೂಪ್ರದೇಶ ಅಥವಾ ನೀರು ಅಡಚಣೆಯಿಂದ ಈ ದುರಂತ ಸಂಭವಿಸಿದೆ ಎಂದು ಇಂಟರ್‌ನ್ಯಾಷನಲ್‌ ಏರ್‌ ಟ್ರಾನ್ಸ್‌ಪೋರ್ಟ್‌ ಅಸೋಸಿಯೇಷನ್‌ ತಿಳಿಸಿದೆ.

ಮೋಡ ಕವಿದ ವಾತಾವರಣದಲ್ಲಿ ಅಪಘಾತ ಸಂಭವಿಸಿದೆ. ಹೆಲಿಕಾಪ್ಟರ್‌ ಅಪಘಾತದ ಸಮಯದಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸಲು ಆಗಿಲ್ಲ ಎಂದು ಹೇಳಿದೆ.

error: Content is protected !!