ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಹಾಗೂ ಚಲನಚಿತ್ರ ನಿರ್ಮಾಪಕ ಆನಂದ ಅಪ್ಪುಗೋಳ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ.
ಸಹಕಾರ ಬ್ಯಾಂಕ್‌ನಲ್ಲಿ ಸುಮಾರು 250 ಕೋಟಿ ರೂಪಾಯಿ ವಂಚನೆ ಎಸಗಿದ ಆರೋಪ ಅಪ್ಪುಗೋಳ್ ಮೇಲಿದೆ.
ಇಡಿ ಅಕ್ರಮ ಹಣ ವರ್ಗಾವಣೆ ನಿಯಂತ್ರಣ ಕಾಯ್ದೆ(ಪಿಎಂಎಲ್‌ಎ) ಅಡಿ ಪ್ರಕರಣ ದಾಖಲಿಸಿತ್ತು.
ಗ್ರಾಹಕರಿಂದ ಠೇವಣಿಯಾಗಿ ಪಡೆದ ಕೋಟ್ಯಂತರ ರೂಪಾಯಿಯನ್ನು ವಂಚಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ಜಾರಿ ನಿರ್ದೇಶನಾಲಯ ನಡೆಸುತ್ತಿದೆ.
2020ರಲ್ಲಿ ಅಪ್ಪುಗೋಳ್ ಒಡೆತನದಲ್ಲಿದ್ದ 31.35 ಕೋಟಿ ರೂ. ಮೌಲ್ಯದ ಆಸ್ತಿಯನ್ನು ತನ್ನ ಸುಪರ್ದಿಗೆ ಪಡೆದಿರುವುದಾಗಿ ಇಡಿ ತಿಳಿಸಿತ್ತು.
ಅಪ್ಪುಗೋಳ್ ಹನುಮಾನ್ ನಗರದಲ್ಲಿನ ಬಂಗಲೆ, ಬಾಕ್ಸೈಟ್ ರಸ್ತೆಯಲ್ಲಿನ ಜಾಗ, ತಾಲ್ಲೂಕಿನ ಬಿ.ಕೆ. ಬಾಳೇಕುಂದ್ರಿಯಲ್ಲಿನ ಮನೆ ಮತ್ತು ನೆಹರೂ ನಗರದಲ್ಲಿನ ಕಚೇರಿ ಹಾಗೂ ಅವರ ಹೆಸರಿನಲ್ಲಿನ ಬ್ಯಾಂಕ್ ಖಾತೆಗಳನ್ನು ಪಡೆದುಕೊಳ್ಳಲಾಗಿತ್ತು.
ಸಿಐಡಿ ಡಿವೈಎಸ್‌ಪಿ ಪುರುಷೋತ್ತಮ ನೇತೃತ್ವದ ತಂಡ ಪ್ರಕರಣದ ತನಿಖೆ ನಡೆಸಿ ಬರೋಬ್ಬರಿ 2063 ಪುಟಗಳ ಚಾರ್ಜ್‌ಶೀಟ್ ಅನ್ನು ಬೆಳಗಾವಿ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಪ್ರಕರಣದಲ್ಲಿ ಒಟ್ಟು 13 ಜನರು 275 ಕೋಟಿ ರೂ. ಠೇವಣಿ ಹಣ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ