ಕೊವೀಡ್ ಕಠಿಣ ಕ್ರಮದ ನಡುವೆಯೂ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ನ ಮಹತ್ವದ 10 ದಿನಗಳ ಪಾದಯಾತ್ರೆಗೆ ಭಾನುವಾರ ಚಾಲನೆ ಸಿಕ್ಕಿದೆ.
ಕನಕಪುರ ತಾಲೂಕಿನ ಸಂಗಮ ಕ್ಷೇತ್ರದಲ್ಲಿ ಪಾದಯಾತ್ರೆಗೆ ಚಾಲನೆ ಸಿಕ್ಕಿದೆ.ಇದಕ್ಕೂ ಮುನ್ನ ಸಭಾ ಕಾರ್ಯಕ್ರಮ ನಡೆಯಿತು.
ಕಾಂಗ್ರೆಸ್ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಡೋಲು ಬಾರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದರು.
ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಹಿರಿಯ ಕಾಂಗ್ರೆಸ್ ನಾಯಕರು, ಸಾಧು ಕೋಕಿಲ, ದುನಿಯ ವಿಜಯ್, ಹಲವು ಮಠಾಧೀಶರು ಭಾಗಿಯಾಗಿದ್ದರು.
ಕೊರೊನಾ ಟಫ್ ರೂಲ್ಸ್ ನಡುವೆಯೂ ಹಸ್ತ ಪಡೆ ಪಾದಯಾತ್ರೆ ಮಾಡಿಯೇ ತೀರುತ್ತೇವೆ ಅಂತ ಪಣ ತೊಟ್ಟಿದೆ. ಜನವರಿ 19ರವರೆಗೆ ನಡೆಯಲಿರೋ ಮೇಕೆದಾಟು ಪಾದಯಾತ್ರೆಯನ್ನು ಕಾಂಗ್ರೆಸ್ಗೆ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ.
ಮತ್ತೊಂದು ಕಡೆ ರಾಜ್ಯಾದ್ಯಂತ ವೀಕೆಂಡ್ ಕರ್ಪ್ಯೂ ಜಾರಿಯಲ್ಲಿದೆ, ಯಾವುದೇ ರೀತಿಯ ಪಾದಯಾತ್ರೆ, ಪ್ರತಿಭಟನೆಗೆ ಅವಕಾಶವಿಲ್ಲ ಅಂತ ಸರ್ಕಾರ ಕಟ್ಟುನಿಟ್ಟಾಗಿ ಆದೇಶ ಹೊರಡಿಸಿದೆ. ಇದರ ನಡುವೆಯೂ ಕಾಂಗ್ರೆಸ್ ಪಾದಯಾತ್ರೆಗೆ ರಾಮನಗರದಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿದೆ. 2 ಸಾವಿರ ಪೋಲಿಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು