December 23, 2024

Newsnap Kannada

The World at your finger tips!

RAHUL BHAT

ಸಚಿವರ ಪುತ್ರನಿಗೆ ಬ್ಲ್ಯಾಕ್ ಮೇಲ್:ಜ್ಯೋತಿಷಿ ಚಂದ್ರಶೇಖರ್ ಸ್ವಾಮೀಜಿ ಪುತ್ರ ಬಂಧನ

Spread the love

ಸಹಕಾರ ಸಚಿವ ಎಸ್.​ಟಿ.ಸೋಮಶೇಖರ್​ ಪುತ್ರ ನಿಶಾಂತ್​ ಸೋಮಶೇಖರ್ ವಿರುದ್ಧ ನಕಲಿ ವಿಡಿಯೋ ಒಂದನ್ನು ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಪ್ರಕರಣ ಬೆಳಕಿಗೆ ಬಂದಿದೆ.

ಆಡುಗೋಡಿಯ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ.

ಈ ಪ್ರಕರಣದಲ್ಲಿ ಜ್ಯೋತಿಷಿ ಚಂದ್ರಶೇಖರ್ ಸ್ವಾಮೀಜಿ ಪುತ್ರ ರಾಹುಲ್ ಭಟ್ ಕೈವಾಡ ಇರುವ ಶಂಕೆ ಇದೆ.

ತನಿಖೆಯನ್ನು ಮುಂದುವರಿಸಿರುವ ಪೊಲೀಸರು, ರಾಹುಲ್ ಭಟ್​ರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ರಾತ್ರಿಯೇ ಸಿಸಿಬಿ ಪೊಲೀಸರು ಬಂಧಿಸಿ, ತೀವ್ರ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಮಾತ್ರವಲ್ಲ ಕೋರ್ಟ್​ಗೆ ಹಾಜರುಪಡಿಸಿರುವ ಪೊಲೀಸ್ ಅಧಿಕಾರಿಗಳು ಐದು ದಿನಗಳ ಕಾಲ ಆರೋಪಿಯನ್ನು ವಶಕ್ಕೆ
ಪಡೆದುಕೊಂಡಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!