ಗ್ರಾಮವೊಂದರ ಮನೆಯಲ್ಲಿ ನಿಧಿ ಶೋಧಕ್ಕಾಗಿ ಮನೆ ಒಳಗೆ ವಾಮಾಚಾರ, ಬಲಿಪೂಜೆ ನಡೆಸಿ ಮನೆಯ ಬೇಡ್ ರೂಂ ನಲ್ಲೆ ಸುಮಾರು 15 ಅಡಿ ಗುಂಡಿ ತೆಗೆದು ಬಲಿ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ದೊಡ್ಡ ಬಲಿ ಕೊಡಲು ಸಂಚು ರೂಪಿಸಿದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾದ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.
ಕೊಡಗಿನ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಚೆನ್ನಯ್ಯನಕೋಟೆ ಹೊಳಮಾಳ ಗ್ರಾಮದ ಕೋಟೆ ಪೈಸಾರಿಯ ಎಂ.ಆರ್.ಗಣೇಶ್ ಹಾಗೂ ಉಡುಪಿ ಮೂಲದ ಸಾಧಿಕ್ ಎಂಬವರ ಮನೆಯ ಕೊಠಡಿಯಲ್ಲಿ ವಾಮಾಚಾರ, ಬಲಿಪೂಜೆ ನಡೆಸುತ್ತಿದ್ದಾರೆ ಎಂದು ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿದೆ.
ಇವರ ಮನೆಗೆ ಡಿಸಿಐಬಿ ಹಾಗೂ ಸಿದ್ದಾಪುರ ಪೊಲೀಸರು ಪರಿಶೀಲಿಸಿದ್ದು, ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿಗಳಿಬ್ಬರು ಮಂಗಳೂರು ಹಾಗೂ ಕೇರಳ ಮೂಲದ ವಾಮಾಚಾರಿಗಳ ಬಲೆಗೆ ಬಿದ್ದಿದ್ದಾರೆ.
ಇವರು ಮೌಢ್ಯತೆಯಿಂದ ಮನೆಯ ಬೆಡ್ ರೂಂನ ಮಣ್ಣಿನಡಿಯಲ್ಲಿ ನಿಧಿ ಇದೆಯೆಂದು 15 ಅಡಿಗಳಷ್ಟು ಮಣ್ಣು ತೆಗೆದು ಗುಂಡಿತೋಡಿ ವಾಮಾಚಾರ ನಡೆಸಿದ್ದಾರೆ.ನಿಧಿ ಶೋಧನೆಯ ಸಂಬಂಧ ಕೋಳಿ ಬಲಿ ಪೂಜೆ ನಡೆಸಿ, ಮುಂದಿನ ದಿನಗಳಲ್ಲಿ ದೊಡ್ಡ ಬಲಿ ಪೂಜೆ ನಡೆಸಲು ನಿರ್ಧರಿಸಲಾಗಿತ್ತೆಂದು ಆರೋಪಿ ವ್ಯಕ್ತಿಗಳಿಂದ ತಿಳಿದುಬಂದಿದೆ.
ಈ ಇಬ್ಬರನ್ನು ಬಂಧಿಸಿದ್ದರಿಂದ ಮುಂದೆ ನಡೆಯಬಹುದಾಗಿದ್ದ ಭಾರೀ ಅನಾಹುತವನ್ನು ಪೊಲೀಸರು ತಪ್ಪಿಸಿದಂತಾಗಿದೆ. ಅದು ಅಲ್ಲದೇ ಇವರು ಮೌಢ್ಯತೆಯಿಂದ ಇನ್ನೂ ಕೆಲವು ಅಡಿಗಳಷ್ಟು ಮಣ್ಣು ತೆಗೆದಿದಲ್ಲಿ ಮನೆ ಕುಸಿದು ಮನೆಯಲ್ಲಿದ್ದವರೆಲ್ಲ ಸಾವನ್ನಪ್ಪುವ ಸಾಧ್ಯತೆಯಿತ್ತು.
ಇನ್ನೂ ಕೆಲವರು ತಲೆಮರೆಸಿಕೊಂಡಿದ್ದು, ಪೊಲೀಸರು ಆರೋಪಿಗಳ ಪತ್ತೆ ಕಾರ್ಯ ಮುಂದುವರಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ