ಓಮಿಕ್ರಾನ್ ಹೆಚ್ಚಾಗುತ್ತಿರುವ ನಡುವೆಯೇ ಈಗಾಗಲೇ ಎರಡು ಡೋಸ್ ಪಡೆದ 60 ವರ್ಷ ದಾಟಿದ ಅನಾರೋಗ್ಯ ಪೀಡಿತರು, ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ಲಸಿಕೆ ಅಭಿಯಾನ ಇಂದಿನಿಂದ ಆರಂಭವಾಗಲಿದೆ.
ಜ.10 ರಿಂದ 60 ವರ್ಷ ದಾಟಿದವರಿಗೆ, ಆರೋಗ್ಯ ಸಿಬ್ಬಂದಿ ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡುವುದಾಗಿ ಪ್ರಧಾನಿ ಡಿ 25 ರಂದು ಪ್ರಕಟಿಸಿದ್ದರು.
ಈ ಹಿನ್ನೆಲೆಯಲ್ಲಿ ಬೂಸ್ಟರ್ ಡೋಸ್ ಲಸಿಕಾ ಅಭಿಯಾನಕ್ಕೆ ಇಂದಿನಿಂದ ಚಾಲನೆ ದೊರಯಲಿದೆ. ಅದರಂತೆ ಜ.8ರ ಶನಿವಾರದಿಂದಲೇ ಕೋವಿನ್ ಪೋರ್ಟಲ್‌ನಲ್ಲಿ 3ನೇ ಡೋಸ್ ಪಡೆಯಲು ಬುಕ್ಕಿಂಗ್ ಆರಂಭವಾಗಿದೆ. ಲಸಿಕಾ ಕೇಂದ್ರಗಳಲ್ಲಿ ನೇರವಾಗಿ ಬುಕ್ ಮಾಡಿಸಿ ಲಸಿಕೆ ಪಡೆಯಲು ಅವಕಾಶವಿದೆ.
ಡೋಸ್ ಯಾರು ಪಡೆಯಬಹುದು?:
ವೈದ್ಯಕೀಯ ಸಿಬ್ಬಂದಿ, 60 ವರ್ಷ ಮೇಲ್ಪಟ್ಟ ಪೂರ್ವ ರೋಗಪೀಡಿತರು ಹಾಗೂ ಮುಂಚೂಣಿ ಕಾರ್ಯಕರ್ತರಿಗೆ 2ನೇ ಡೋಸ್ ಲಸಿಕೆ ಪಡೆದು 9 ತಿಂಗಳು ಅಥವಾ 39 ವಾರ ಆಗಿರಬೇಕು. ಅಂತಹವರು ಬೂಸ್ಟರ್ ಡೋಸ್‌ನ್ನು ಪಡೆಯಲು ಅರ್ಹರಾಗಿರುತ್ತಾರೆ.
ಯಾವ ಲಸಿಕೆ ತೆಗೆದುಕೊಳ್ಳಬೇಕು?:
ಮೊದಲಿನ 2 ಡೋಸ್ ಲಸಿಕೆ ಯಾವ ಕಂಪನಿಯಾಗಿರುತ್ತದೆ ಅದೇ ಕಂಪನಿಯ ಲಸಿಕೆಯನ್ನು 3ನೇ ಡೋಸ್ ಆಗಿ ಪಡೆಯಬೇಕು. ಅಂದರೆ ಮೊದಲು ಕೋವ್ಯಾಕ್ಸಿನ್ ಅಥವಾ ಕೋವಿಶೀಲ್ಡ್ ಡಬಲ್ ಡೋಸ್ ಲಸಿಕೆ ಪಡೆದವರು ಪುನಃ ಅದೇ ಲಸಿಕೆಯನ್ನು ಪಡೆಯಬೇಕು.
ಬೂಸ್ಟರ್ ಡೋಸ್ ಉಪಯೋಗ :
ಕಾಯಿಲೆ ಪೀಡಿತರಿಗೆ ಮೊದಲ 2 ಡೋಸ್ ಪಡೆದರೂ ಅವರ ರೋಗನಿರೋಧಕ ಶಕ್ತಿ ವೃದ್ಧಿಸದೇ ಇರಬಹುದು. ಇನ್ನು ವೈದ್ಯ ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ನಿತ್ಯ ಸಾವಿರಾರು ಜನ ಹಾಗೂ ರೋಗಿಗಳು ಸಂಪರ್ಕಕ್ಕೆ ಬರುತ್ತಿರುತ್ತಾರೆ. ಹೀಗಾಗಿ ಅವರಿಗೆ ಮುಂಜಾಗ್ರತಾ ಡೋಸ್ ನೀಡಲಾಗುತ್ತದೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ