ಕೋವಿಡ್ ನಿಯಮ ಉಲ್ಲಂಘಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿರೋಧ ಪಕ್ಷದ ಉಪನಾಯಕ ಸಿದ್ದರಾಮಯ್ಯ ಸೇರಿ 30 ಮಂದಿ ವಿರುದ್ಧ ಸಾತನೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕೋವಿಡ್ ಸೋಂಕು ನಿಯಂತ್ರಣದ ಉದ್ದೇಶದಿಂದ ಸರ್ಕಾರ ರಾಜ್ಯದಲ್ಲಿ ಎಲ್ಲ ಪ್ರತಿಭಟನೆ, ಪಾದಯಾತ್ರೆಯನ್ನು ನಿಷೇಧಿಸಿದೆ. ವೀಕೆಂಡ್ ಕರ್ಫ್ಯೂ ವೇಳೆ ಮೇಕೆದಾಟು ಪಾದಯಾತ್ರೆ ಕೈಗೊಂಡಿದ್ದಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ(ಎನ್ಡಿಎಂಎ) ಕಾಯ್ದೆಯ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.
ವೀಕೆಂಡ್ ಕರ್ಫ್ಯೂ ವೇಳೆ ಪಾದಯಾತ್ರೆ ಕೈಗೊಂಡಿದ್ದಕ್ಕೆ ಜನರಿಂದ ವ್ಯಾಪಕ ಟೀಕೆ ಕೇಳಿ ಬಂದಿತ್ತು. ಸಾಮಾನ್ಯ ಜನರು ರಸ್ತೆಗೆ ಬಂದರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಆದರೆ ಭಾರೀ ಸಂಖ್ಯೆಯಲ್ಲಿ ಜನರನ್ನು ಸೇರಿಸಿ ಪಾದಯಾತ್ರೆ ಮಾಡಿದವರ ಮೇಲೆ ಕ್ರಮ ಯಾಕಿಲ್ಲ ಎಂದು ಜನರು ಪ್ರಶ್ನಿಸಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು.
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
More Stories
ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು