ಜ. 5 ರಂದು ಪಂಜಾಬ್ನಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿ ಭದ್ರತಾ ಲೋಪ ಪ್ರಕರಣ ಕುರಿತಂತೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದ ನಾಲ್ವರನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿ ತೀಪು೯ ನೀಡಿದೆ.
ಸಾವಿರಕ್ಕೂ ಹೆಚ್ಚು ಕರೆಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಿಟನ್ನಿಂದ ಸುಪ್ರೀಂ ಕೋರ್ಟ್ನ ಹಲವು ವಕೀಲರಿಗೆ ಬೆದರಿಕೆ ಕರೆಗಳು ಬಂದಿವೆ. ಮೂಲಗಳ ಪ್ರಕಾರ, ರೆಕಾರ್ಡ್ ಮಾಡಿರುವ ಮೆಸೇಜ್ಗಳ ಜೊತೆಗೆ ಬೆದರಿಕೆ ಕರೆ ಕೂಡ ಬಂದಿದೆವೆಯಂತೆ.
ಈ ಕರೆಗಳು ಇಂಗ್ಲೆಂಡ್ ನಂಬರ್ನಿಂದ ಬಂದಿವೆ ಅಂತಾರಾಷ್ಟ್ರೀಯ ಹುನ್ನಾರದ ಬಗ್ಗೆ ಮತ್ತಷ್ಟು ಶಂಕೆ ವ್ಯಕ್ತವಾಗಿದೆ . ಹೆಸರು ಹೇಳದ ಸಂಘಟನೆಯ ಹೆಸರಲ್ಲಿ ಬೆದರಿಕೆ ಕರೆ ಹಾಗೂ ಮೆಸೇಜ್ಗಳನ್ನು ಕಳುಹಿಸಲಾಗಿದೆ.
1984ರಲ್ಲಿ ಸಿಖ್ ವಿರೋಧಿ ದಂಗೆಯ ಹಿಂಸಾಚಾರಕ್ಕೆ ಇನ್ನೂ ನಿಮಗೆ ನ್ಯಾಯ ಕೊಡಿಸಲು ಸಾಧ್ಯವಾಗಿಲ್ಲ. ಹೀಗಿರುವಾಗ, ಮೋದಿ ಭದ್ರತಾ ಲೋಪ ಪ್ರಕರಣವನ್ನು ಸ್ವತಂತ್ರ ತನಿಖೆಗೆ ನೀಡ್ತೀರಾ? ಎಂದು ಬೆದರಿಕೆ ಹಾಕಿದ್ದಾರೆ ಅಂತಾ ವರದಿಯಾಗಿದೆ.
ಈ ಬಗ್ಗೆ ಹಿರಿಯ ವಕೀಲ ಮಹೇಶ್ ಜೇಠ್ಮಲಾನಿ, ನನ್ನ ಪ್ರಕಾರ ಸುಪ್ರೀಂ ಕೋರ್ಟ್ ಬಹುತೇಕ ವಕೀಲರಿಗೆ ಇಂಥ ಮೆಸೇಜ್ ಕಳುಹಿಸಿದ್ದಾರೆ. ಈ ವಿಚಾರವನ್ನ ‘ದಿ ಅಡ್ವೋಕೇಟ್ಸ್ ಆನ್ ರೆಕಾರ್ಡ್ ಅಸೋಸಿಯೇಷನ್’ ಗಂಭೀರವಾಗಿ ಪರಿಗಣಿಸಬೇಕು. ಇದು ಸತ್ಯ. ನನಗೆ ಓರ್ವ ವಕೀಲರೊಬ್ಬರು ಕರೆ ಮಾಡಿ ತಿಳಿಸಿದ್ದಾರೆ. ಲಂಡನ್ನಿಂದ ಕರೆ ಮಾಡಿರೋದಾಗಿ ತಿಳಿಸಿದ್ದಾರೆ. ಸುಪ್ರಿಂ ಕೋರ್ಟ್ ನಡೆಸುವ ವಿಚಾರಣೆಯಲ್ಲಿ ಭಾಗಿಯಾಗದಂತೆ ಬೆದರಿಕೆ ಹಾಕಿದ್ದಾರೆ ಎಂದು ತಿಳಿಸಿದ್ದಾರೆ.
ಅಷ್ಟೇ ಅಲ್ಲ ಪ್ರಧಾನಿ ಮೋದಿ ಭದ್ರತಾ ಲೋಪದ ಹೊಣೆಯನ್ನೂ ಈ ಸಂಘಟನೆ ಹೊತ್ತಿದೆ, ಅದಕ್ಕೆ ಕಾರಣ ನಾವೇ ಎಂದು ಹೇಳಿದ್ದಾರೆ. ಇನ್ನು ಈ ರೀತಿಯ ಕರೆಯನ್ನು ನಿಷೇಧಿತ ಸಿಖ್ ಫಾರ್ ಜಸ್ಟೀಸ್ ಸಂಘಟನೆ ಮಾಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
- ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
- ₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
- ಮುಡಾ ಹಗರಣ: ಸ್ನೇಹಮಯಿ ಕೃಷ್ಣ ಮತ್ತು ಕೈ ಮುಖಂಡ ಲಕ್ಷ್ಮಣ್ ನಡುವೆ ವಾಗ್ವಾದ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ