February 23, 2026

Newsnap Kannada

The World at your finger tips!

sideeshwara

ಪ್ರವಚನ ಕಾರ್ಯಕ್ರಮಕ್ಕೆ ಬಂದಿದ್ದ ಸಿದ್ದೇಶ್ವರ ಸ್ವಾಮೀಜಿಗೆ ಗಂಭೀರ ಗಾಯ

Spread the love

ಚಿಕ್ಕೋಡಿಯ ಕೇರೂರಿನಲ್ಲಿ ಆಯೋಜಿಸಲಾಗಿದ್ದ ಪ್ರವಚನದಲ್ಲಿ ಸಿದ್ದೇಶ್ವರ ಸ್ವಾಮೀಜಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದಾರೆ.

ಬೆಳಗಾವಿ ಜಿಲ್ಲೆಯ ಕೇರೂರು ಗ್ರಾಮದಲ್ಲಿ ಪ್ರವಚನ ಕಾರ್ಯಕ್ರಮ ಆಯೋಜಿಸಲಾಗಿತ್ತು, ಈ ವೇಳೆ ಶೌಚಾಲಯಕ್ಕೆ ತೆರಳಿದ್ದಾಗ ಸಿದ್ದೇಶ್ವರ ಸ್ವಾಮೀಜಿ ಕಾಲು ಜಾರಿ ಬಿದ್ದಿದ್ದಾರೆ.

ಶ್ರೀಗಳಿಗೆ ಗಂಭೀರ ಗಾಯಗಳಾಗಿದ್ದು ಮಹಾರಾಷ್ಟ್ರದ ಕನ್ನೇರಿಮಠದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಶ್ರೀಗಳಿಗೆ ಗಂಭೀರ ಪ್ರಮಾಣದ ಗಾಯವಾಗಿರುವ ಹಿನ್ನೆಲೆಯಲ್ಲಿ ಪ್ರವಚನ ಕಾರ್ಯಕ್ರಮ ರದ್ದು ಮಾಡಲಾಗಿದೆ.

error: Content is protected !!