ಮೇಕೆದಾಟು ಆಣೆಕಟ್ಟು ನಿರ್ಮಾಣ ವಿರೋಧಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮತ್ತೆ ಮುಂದೂಡಿದೆ.
ಈ ಪ್ರಕರಣ ವಿಚಾರಣೆಯನ್ನು ಜನವರಿ 25ರಂದು ನಡೆಸಲಾಗುವುದು ಎಂದು ನ್ಯಾ.ಎ.ಎಂ.ಖಾನ್ವಿಲ್ಕರ್ ನೇತೃತ್ವದ ತ್ರಿ ಸದಸ್ಯ ಪೀಠ ಹೇಳಿದೆ.
ತಮಿಳುನಾಡು ಸಲ್ಲಿಸಿದ್ದ ಎರಡು ಅರ್ಜಿಗಳ ವಿಚಾರಣೆ ಇಂದು ನಡೆಯಬೇಕಿತ್ತು. ವಿಚಾರಣೆ ನಡೆಯಬೇಕಿದ್ದ ಅರ್ಜಿ, ಮುಲ್ಲೈ ಪೆರಿಯಾರ್ ಆಣೆಕಟ್ಟು ಸುರಕ್ಷತೆ ಸಂಬಂಧಿಸಿದ ಪ್ರಕರಣವೊಂದರ ಜೊತೆಗೆ ಸುಪ್ರೀಂಕೋರ್ಟ್ ಟ್ಯಾಗ್ ಮಾಡಿತ್ತು.
ಮಂಗಳವಾರ ವಿಚಾರಣೆ ವೇಳೆ ಕರ್ನಾಟಕ ಮತ್ತು ತಮಿಳುನಾಡು ಪರ ವಾದ ಮಂಡಿಸಿದ ವಕೀಲರು ಮುಲ್ಲೈ ಪೆರಿಯಾರ್ ಮತ್ತು ಮೇಕೆದಾಟಿಗೂ ಯಾವುದೇ ಸಂಬಂಧ ಇಲ್ಲ ಎರಡು ಅರ್ಜಿಗಳು ಪ್ರತ್ಯೇಕ ವಿಚಾರಣೆ ನಡೆಯಬೇಕು ಎಂದು ಮನವಿ ಮಾಡಿದರು.
ಮುಖ್ಯ ಅರ್ಜಿ ವಿಚಾರಣೆ ಹಂತದಲ್ಲಿರುವಾಗಲೇ ಎನ್‍ಜಿಟಿ ಆದೇಶವೊಂದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ತಮಿಳುನಾಡು ಮೇಲ್ಮನವಿ ಅರ್ಜಿ ಸಲ್ಲಿಸಿದೆ. ಕಾಮಗಾರಿ ಪರಿಶೀಲನೆಗೆ ಸಮಿತಿ ರಚಿಸಿ ಚೆನ್ನೈ ಹಸಿರು ಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿತ್ತು. ಅದಕ್ಕೂ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ಆದೇಶವನ್ನು ತಮಿಳುನಾಡು ಪ್ರಶ್ನಿಸಿದೆ.
- ವಿಮಾನ ಪತನ: ಕೊನೆಯ ಕ್ಷಣದಲ್ಲಿ ಲ್ಯಾಂಡಿಂಗ್ ಗೇರ್ ವೈಫಲ್ಯ; 179 ಮಂದಿ ದುರ್ಮರಣ!
- 2025ನೇ ಸಾಲಿನ ರೈಲ್ವೆ ಗ್ರೂಪ್-ಡಿ ಹುದ್ದೆಗಳಿಗೆ 32,000ಕ್ಕೂ ಹೆಚ್ಚು ನೇಮಕಾತಿ
- ವಿಚಾರ ಕ್ರಾಂತಿಯ ಯುಗಪುರುಷ ಕುವೆಂಪು
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
More Stories
ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ