February 21, 2026

Newsnap Kannada

The World at your finger tips!

somanath

ರಾಕೆಟ್ ವಿಜ್ಞಾನಿ ಎಸ್.ಸೋಮನಾಥ್ ಇಸ್ರೋ ನೂತನ ಅಧ್ಯಕ್ಷ

Spread the love

ರಾಕೆಟ್ ವಿಜ್ಞಾನಿ ಎಸ್.ಸೋಮನಾಥ್ ಅವರು ಇಸ್ರೋ ನೂತನ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ.

ಇಸ್ರೋ ಅಧ್ಯಕ್ಷ ಕೆ.ಶಿವನ್ ಅಧಿಕಾರಾವಧಿ ಅಂತ್ಯಗೊಂಡ ನಂತರ ಆ ಸ್ಥಾನಕ್ಕೆ ಇದೀಗ ಹಿರಿಯ ವಿಜ್ಞಾನಿ ಎಸ್.ಸೋಮನಾಥ್ ನೇಮಕಗೊಂಡಿದ್ದಾರೆ.

ಇಸ್ರೋ ಅಧ್ಯಕ್ಷರಾಗಿರುವುದರ ಜೊತೆಗೆ, ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿ ಮತ್ತು ಬಾಹ್ಯಾಕಾಶ ಆಯೋಗದ ಅಧ್ಯಕ್ಷರಾಗಿ ಮುಂದಿನ ಮೂರು ವರ್ಷಗಳ ಕಾಲ ಕಾರ್ಯನಿರ್ವಹಿಸಲಿದ್ದಾರೆ.

ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದ ನಿರ್ದೇಶಕರಾಗಿ 2018ರಿಂದಲೂ ಸೇವೆ ಸಲ್ಲಿಸುತ್ತಿರುವ ಸೋಮನಾಥ್, ಎಸ್ ಎಲ್ ಪಿ ಸೆಂಟರ್‌ನ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಅನುಭವ ಹೊಂದಿದ್ದಾರೆ.

ಬೆಂಗಳೂರಿನ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಸೈನ್ಸ್  ಹಳೆಯ ವಿದ್ಯಾರ್ಥಿ ಸೋಮನಾಥ್, 1985ರಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋಗೆ ಸೇರಿದರು ಮತ್ತು ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ ಮತ್ತು ಜಿಯೋಸಿಂಕ್ರೋನಸ್ ಸ್ಯಾಟಲೈಟ್ ಲಾಂಚ್ ವೆಹಿಕಲ್ ಯೋಜನೆಗಳಲ್ಲಿ ವ್ಯಾಪಕವಾಗಿ ಕೆಲಸ ಮಾಡಿದ್ದಾರೆ.

error: Content is protected !!