ದಾವಣಗೆರೆ ಜಿಲ್ಲೆಯ ಜಗಳೂರು ಸಮೀಪ ಬೆಳ್ಳಂಬೆಳಗ್ಗೆ 5 ಗಂಟೆ ವೇಳೆ ಸಂಭವಿಸಿದ ಭೀಕರ ರಸ್ತೆ ದುರಂತಕ್ಕೆ ಏಳು ಜನರು ಸಾವನ್ನಪ್ಪಿದ ಘಟನೆ ಜರುಗಿದೆ.
ಜಗಳೂರು ತಾಲೂಕಿನ ಕಾನನಕಟ್ಟೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಇಂಡಿಕಾ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಏಳು ಮಂದಿ ಮೃತಪಟ್ಟಿದ್ದಾರೆ.
ಮೃತರ ವಿವರ ತಿಳಿದು ಬಂದಿಲ್ಲ.ಅಪಘಾತದ ತೀವ್ರತೆಗೆ ಆರು ಜನ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೆ ಓರ್ವ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ.
ಯಾದಗಿರಿ ಜಿಲ್ಲೆಯ ಶಾಪುರ್ ಮೂಲದ ಇವರು ಬೆಂಗಳೂರಿಗೆ ತೆರಳುತ್ತಿದ್ದಾಗ ದುರ್ಘಟನೆ ನಡೆದಿದೆ. ಬೆಳಿಗ್ಗೆ 5 ಗಂಟೆಯ ವೇಳೆಗೆ ನಿದ್ದೆಯ ಮಂಪರಿನಲ್ಲಿ ಚಾಲಕ ಡಿವೈಡರ್‌ಗೆ ಕಾರನ್ನು ಗುದ್ದಿರಬಹುದು ಎಂದು ಶಂಕಿಸಲಾಗಿದೆ.
ಸ್ಥಳಕ್ಕೆ ದಾವಣಗೆರೆ ಎಸ್ಪಿ ಸಿಬಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು