ಬೆಂಗಳೂರಿನಲ್ಲಿ ಶಾಪಿಂಗ್ ಮಾಲ್‍ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಗೃಹ ಬಳಕೆ ವಸ್ತುಗಳೆಲ್ಲಾ ಬೆಂಕಿಗೆ ಆಹುತಿಯಾದ ಘಟನೆ ಜರುಗಿದೆ.
ಅರಕೆರೆ ಗೇಟ್ ಬಳಿಯ ಸೌಥ್ ಇಂಡಿಯನ್ ಮಾಲ್‍ನ ನೆಲ ಮಹಡಿಯಲ್ಲಿ ಈ ಘಟನೆ ನಡೆದಿದೆ. ಮಾಲ್‍ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ಇದೆ.
ವಾರಾಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ಮಾಲ್‍ನಲ್ಲಿ ಯಾವ ಸಿಬ್ಬಂದಿ ಇರಲಿಲ್ಲ. ಇದರಿಂದಾಗಿ ಬೆಂಕಿ ಕಾಣಿಸಿಕೊಂಡರೂ ತಕ್ಷಣ ಯಾರಿಗೂ ತಿಳಿದಿರಲಿಲ್ಲ.ನಂತರ ನೈಟ್ ಬೀಟ್‍ನಲ್ಲಿದ್ದ ಪೊಲೀಸರಿಗೆ ಮಾಲ್‍ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ವಿಚಾರ ತಿಳಿದಿದೆ. ಆದರೆ ವಿಷಯ ತಿಳಿಯುವ ವೇಳೆಗೆ ಮಾಲ್‍ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆಗಳು, ಗೃಹಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.
ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ಆಗಮಿಸಿದ್ದು, ಬೆಂಕಿ ನಂದಿಸುತ್ತಿರುವುದರಲ್ಲಿ ನಿರತವಾಗಿದೆ. ಏಳು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
- ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
- 104ರನ್ಗೆ ಆಸ್ಟ್ರೇಲಿಯಾ ಆಲೌಟ್ ,ಬುಮ್ರಾಗೆ 5 ವಿಕೆಟ್
- ಚನ್ನಪಟ್ಟಣ: 4 ನೇ ಸುತ್ತಿನಲ್ಲಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ
More Stories
ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
ಚನ್ನಪಟ್ಟಣ: 4 ನೇ ಸುತ್ತಿನಲ್ಲಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ