ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಹಾಗೂ ಎರಡನೇ ಹಂತದ ಪಟ್ಟಿಯನ್ನು ಬಿಡುಗಡೆ ಮಾಡಿದೆ
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೋರಖ್‌ಪುರ (ನಗರ) ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಸಿಎಂ ಯೋಗಿ ಆದಿತ್ಯನಾಥ್ ಅಯೋಧ್ಯೆ ಅಥವಾ ಮಥುರಾದಿಂದ ಸ್ಪರ್ಧಿಸಲಿದ್ದಾರೆ ಎಂಬ ವರದಿಗಳು ಬಂದಿದ್ದವು.
ಆದರೆ ಮೊದಲ ಹಂತದ 57 ಹಾಗೂ ಎರಡನೇ ಹಂತದ 38 ಸೀಟುಗಳಲ್ಲಿ ಸ್ಪರ್ಧಿಸಲಿರುವ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಬಿಡುಗಡೆ ಮಾಡಿದ್ದಾರೆ.
ಯೋಗಿ ಆದಿತ್ಯನಾಥ್ ಗೋರಖ್‌ಪುರ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.
2017ರವರೆಗೆ ಸತತ ಐದು ಬಾರಿ ಲೋಕಸಭೆಗೆ ಆಯ್ಕೆಯಾಗಿರುವ ಪ್ರಬಲ ಕ್ಷೇತ್ರದಿಂದಲೇ ಯೋಗಿ ಆದಿತ್ಯನಾಥ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ. ಪಕ್ಷ ಹೇಳುವ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಲು ನಾನು ಸಿದ್ಧ ಎಂದು ಯೋಗಿ ಅವರು ಹೇಳಿದ್ದರು.
ಈ ಕುರಿತು ಪ್ರತಿಕ್ರಿಯಿಸಿರುವ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್, ಬಿಜೆಪಿ ಯೋಗಿ ಆದಿತ್ಯನಾಥ್ ಅವರನ್ನು ಗೋರಖ್‌ಪುರಕ್ಕೆ ಕಳುಹಿಸಿರುವುದು ನನಗೆ ಇಷ್ಟವಾಗಿದೆ. ಯೋಗಿ ಅಲ್ಲೇ ಉಳಿಯಬೇಕು, ಅಲ್ಲಿಂದ ಬರುವ ಅಗತ್ಯವಿಲ್ಲ ಎಂದು ತಿವಿದಿದ್ದಾರೆ.
- ಮುಡಾ ಹಗರಣ: ಲೋಕಾಯುಕ್ತ ಸಂಸ್ಥೆಯೇ ಅಪರಾಧಿ ಸ್ಥಾನದಲ್ಲಿದೆ- ಸ್ನೇಹಮಯಿ ಕೃಷ್ಣ ಆರೋಪ
- ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
- ಕರ್ನಾಟಕ ಸೇರಿದಂತೆ 14 ರಾಜ್ಯಗಳಲ್ಲಿ 2 ದಿನ ಭಾರೀ ಮಳೆಯ ಮುನ್ಸೂಚನೆ
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ