ಕೊರೋನಾ ಸೋಂಕಿತ ವ್ಯಕ್ತಿಯ ಸಂಪರ್ಕ ಮತ್ತು ಕೊರೋನಾ ರೋಗ ಲಕ್ಷಣಗಳನ್ನು ಹೊಂದಿದವರು ಕಡ್ಡಾಯವಾಗಿ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಬೇಕು. ಒಂದು ವೇಳೆ ಕೊರೋನಾ ಪರೀಕ್ಷೆಯನ್ನು ನಿರಾಕರಿಸಿದರೆ 50,000 ರೂಗಳ ದಂಡ ಮತ್ತು 6 ತಿಂಗಳಿನಿಂದ 3 ವರ್ಷಗಳ ವರೆಗೆ ಜೈಲು ಶಿಕ್ಷೆ ವಿಧಿಸಲು ಸರ್ಕಾರ ಮುಂದಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವಗಳ ನಿರ್ದೇಶನಾಲಯ ಅಧಿಕೃತ ಆದೇಶ ಹೊರಡಿಸಿದೆ.
ಕೋವಿಡ್ ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿದ್ದ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರು, ಕೋವಿಡ್ ಸೋಂಕಿನಲಕ್ಷಣಗಳಿರುವ ವ್ಯಕ್ತಿಗಳು ಕೋವಿಡ್ ಚಿಕಿತ್ಸೆಯಲ್ಲಿ ತೊಡಗಿರುವ ವೈದ್ಯರು, ಸಿಬ್ಬಂದಿ, ಕಂಟೈನ್‌ಮೆಂಟ್ ಮತ್ತು ಬಫರ್ ವಲಯದಲ್ಲಿನ ವ್ಯಕ್ತಿಗಳಿಗೆ ಕೊರೋನಾ ಪರೀಕ್ಷೆಯನ್ನು ಕಡ್ದಾಯಗೊಳಿಸಲಾಗಿದೆ.
ಈ ಆದೇಶವನ್ನು ಕರ್ನಾಟಕ ಸಾಂಕ್ರಾಮಿಕರೋಗಿಗಳ ಸುಗ್ರೀವಾಜ್ಞೆ 2020ರ ಅನ್ವಯ ವಿಧಿಸಲಾಗಿದೆ.
More Stories
ಬಿಜೆಪಿ ಪರಿಷತ್ ಸದಸ್ಯ ಸಿ.ಟಿ. ರವಿ ಬಿಡುಗಡೆ: ಹೈಕೋರ್ಟ್ ತಕ್ಷಣ ಬಿಡುಗಡೆಗೆ ಆದೇಶ
ಯೂಟ್ಯೂಬ್ ನೋಡಿ ಬೈಕ್ ಕಳವು ತರಬೇತಿ: 13 ಲಕ್ಷ ಮೌಲ್ಯದ 20 ಬೈಕ್ಗಳ ಕಳ್ಳತನ
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ