ಪಂಜಾಬ್ನಲ್ಲಿ ಫೆಬ್ರವರಿ 14 ರಂದು ನಡೆಯಬೇಕಾಗಿದ್ದ ಚುನಾವಣೆಯನ್ನು ಫೆಬ್ರವರಿ 20ಕ್ಕೆ ನಡೆಸುವುದಾಗಿ ಚುನಾವಣಾ ಆಯೋಗ ಘೋಷಣೆ ಮಾಡಿದೆ.
ಗುರು ರವಿದಾಸ್ ಜಯಂತಿ ಹಿನ್ನೆಲೆಯಲ್ಲಿ ವಿಧಾನಸಭಾ ಚುನಾವಣೆಯನ್ನು ಮುಂದೂಡುವಂತೆ ಪಂಜಾಬ್ ಸಿಎಂ ಚರಣ್‌ಜಿತ್ ಸಿಂಗ್ ಚೆನ್ನಿ ಹಾಗೂ ಬಿಜೆಪಿ, ಕಾಂಗ್ರೆಸ್ ನಾಯಕರು ಮನವಿ ಮಾಡಿದ ಬೆನ್ನಲ್ಲೇ ಚುನಾವಣಾ ಆಯೋಗ ಈ ನಿರ್ಧಾರವನ್ನು ಪ್ರಕಟಿಸಿದೆ.
ಈ ಸಂಬಂಧ ಇಂದು ಮಹತ್ವದ ಸಭೆ ನಡೆಸಿದ ದೆಹಲಿ ಚುನಾವಣಾ ಆಯೋಗ ಫೆಬ್ರವರಿ 14ಕ್ಕೆ ನಡೆಯಬೇಕಾಗಿದ್ದ ಚುನಾವಣೆಯನ್ನು ಫೆಬ್ರವರಿ 20ಕ್ಕೆ ನಡೆಸುವುದಾಗಿ ತಿಳಿಸಿದೆ.
ಉತ್ತರ ಪ್ರದೇಶ, ಪಂಜಾಬ್, ಗೋವಾ, ಮಣಿಪುರ ಮತ್ತು ಉತ್ತರಾಖಂಡದ ವಿಧಾನಸಭಾ ಚುನಾವಣೆಯನ್ನು 7 ಹಂತಗಳಲ್ಲಿ ನಡೆಸುವುದಾಗಿ ಆಯೋಗ ಘೋಷಿಸಿತ್ತು.
ಆ ಪ್ರಕಾರ ಎರಡನೇ ಹಂತದ ಮತದಾನದ ಭಾಗವಾಗಿ ಪಂಜಾಬ್ನಲ್ಲಿ ಫೆಬ್ರವರಿ 20ಕ್ಕೆ ಮತದಾನ ನಡೆಯಲಿದೆ.
ಮುಂದಿನ ತಿಂಗಳು ಅಂದರೆ ಫೆಬ್ರವರಿ 14 ರಂದು ಪಂಜಾಬ್ನಲ್ಲಿ ವಿಧಾನಸಭೆ ಎಲೆಕ್ಷನ್ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿತ್ತು.
ಆದರೆ ಇದಕ್ಕೆ ನಕಾರವೆತ್ತಿದ್ದ ಪಂಜಾಬ್ ಸಿಎಂ ಚರಣಜಿತ್ ಸಿಂಗ್ ಚೆನ್ನಿ , ಸಂತ ಗುರು ರವಿದಾಸ್ ಜಯಂತಿಯ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಬೇಕು. ಈ ಜಯಂತಿ ಹಿನ್ನೆಲೆಯಲ್ಲಿ ರಾಜ್ಯದ ಹೆಚ್ಚಿನ ದಲಿತ ಬಾಂಧವರು ಕಾಶಿ ಯಾತ್ರೆಯನ್ನು ಕೈಗೊಳ್ಳುತ್ತಾರೆ. ಈ ಸಂದರ್ಭದಲ್ಲಿ ಅವರು ರಾಜ್ಯದಲ್ಲಿ ಇರುವುದಿಲ್ಲ. ಹೀಗಾಗಿ ಚುನಾವಣೆಯನ್ನು ಮುಂದೂಡುವುದು ಸೂಕ್ತ ಎಂದು ಮನವಿ ಮಾಡಿದ್ದರು.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್