ದುಬಾರಿ ಮಾಸ್ಕ್ ದಂಡ: 1000ರು ನಿಂದ 250 ರುಗೆ ಇಳಿಕೆ

Team Newsnap
1 Min Read

ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆ ರಾಜ್ಯದಲ್ಲಿ ಪ್ರತಿಯೊಬ್ಬರು  ಮಾಸ್ಕ್​ ಧರಿಸುವುದು ಕಡ್ಡಾಯ ಮಾಡಿ ದುಬಾರಿ ದಂಡ ವಿಧಿಸಲಾಗುತ್ತಿತ್ತು.
ಆದರೆ ನಗರದಲ್ಲಿ 1000 ರು. ಗ್ರಾಮೀಣ ಪ್ರದೇಶದಲ್ಲಿ 500 ರು ವಿಧಿಸಲಾಗುತ್ತಿದ್ದ ದಂಡ ಪ್ರಮಾಣವನ್ನು ಕ್ರಮವಾಗಿ 250 ರು ಹಾಗೂ 100 ರು ನಿಗದಿಗೊಳಿಸಲಾಗಿದೆ.

ಈ ದುಬಾರಿ ದಂಡಕ್ಕೆ ರಾಜ್ಯದೆಲ್ಲೆಡೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಜನಸಾಮಾನ್ಯರಿಂದ ಜನಪ್ರತಿನಿಧಿಗಳವರೆಗೆ ವಿರೋಧ ವ್ಯಕ್ತಪಡಿಸಿದ್ದವು. ಈ ಹಿನ್ನಲೆ ರಾಜ್ಯ ಸರ್ಕಾರ ಈ ದಂಡ ಪ್ರಮಾಣ ಇಳಕೆ ಮಾಡಿ ಆದೇಶ ಮಾಡಿದೆ.

ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಹೇಳಿಕೆ ನೀಡಿ , ‘ಜೀವ ಮತ್ತು ಜೀವನ’ ಎರಡನ್ನೂ ಸರಿದೂಗಿಸಿಕೊಂಡ ಹೋಗಲು ‌ಸರ್ಕಾರ ಸರ್ವ ಪ್ರಯತ್ನ ಮಾಡುತ್ತಿದೆ. ಜನರು ಸ್ವಯಂ ಪ್ರೇರಿತರಾಗಿ ಮಾಸ್ಕ್ , ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸಾರ್ವಜನಿಕರ ವಿರೋಧ ಹಾಗೂ ತಜ್ಞರ ಸಲಹೆಯಂತೆ ಈ ದಂಡದ ದರ ಇಳಿಸಲಾಗಿದೆ ಎಂದಿದ್ದಾರೆ .

TAGGED:
Share This Article
Leave a comment