November 25, 2024

Newsnap Kannada

The World at your finger tips!

no extra fee to be collected for NEET JEE IIT exams

ಏಪ್ರಿಲ್ 16 ರಿಂದ ದ್ವಿತೀಯ ಪಿಯು ಪರೀಕ್ಷೆ – ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

Spread the love

ಏಪ್ರಿಲ್ 16 ರಿಂದ ಮೇ 4 ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ.

ಪಿಯು ಬೋರ್ಡ್ ನಿಂದ ವೇಳಾಪಟ್ಟಿ ಪ್ರಕಟಿಸಿದೆ ಆಕ್ಷೇಪಣೆ ಸಲ್ಲಿಸಲು ಫೆಬ್ರವರಿ 1 ವರೆಗೆ ಅವಕಾಶ ನೀಡಲಾಗಿದೆ.

ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಫೆಬ್ರವರಿ 17 ರಿಂದ ಮಾರ್ಚ್ 25 ವರೆಗೆ ನಡೆಸಲು ದಿನಾಂಕ ನಿಗದಿಯಾಗಿದೆ.

ದ್ವಿತೀಯ ಪಿಯುಸಿ ಹಾಗೂ ಪ್ರಥಮ ಪಿಯುಸಿ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆಗೆ ಶೇ.70ರಷ್ಟು ಪಠ್ಯಕ್ಕೆ ಮಾತ್ರ ಪರೀಕ್ಷೆ ನಡೆಯಲಿದೆ. ಭಾಷಾ ವಿಷಯಕ್ಕೆ ಶೇ.70ರಷ್ಟು ಪಠ್ಯದಲ್ಲಿ ಪರೀಕ್ಷೆ ನಡೆಯಲಿದ್ದು, ಐಚ್ಛಿಕ ವಿಷಯಗಳಲ್ಲಿ ಯಾವುದೇ ಬದಲಾವಣೆ ಇಲ್ಲ.

ಶೇ.100ರಷ್ಟು ಪಠ್ಯದಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪಿಯು ಬೋರ್ಡ್ ಆದೇಶ ಹೊರಡಿಸಿದೆ.

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗೂ ದಿನಾಂಕ ನಿಗದಿ ಮಾಡಲಾಗಿದೆ.

ಮಾರ್ಚ್ 28 ರಿಂದ ಏಪ್ರಿಲ್ 13 ರವರೆಗೆ ಪರೀಕ್ಷೆ ನಡೆಯಲಿದೆ. ಪ್ರಥಮ ಪಿಯುಸಿ ಪರೀಕ್ಷೆಗೆ ಶೇ.70 ಪಠ್ಯಕ್ಕೆ ಮಾತ್ರ ಪರೀಕ್ಷೆ ನಡೆಯಲಿದ್ದು, ಭಾಷಾ ವಿಷಯಕ್ಕೆ ಶೇ.70ರಷ್ಟು ಪಠ್ಯದಲ್ಲಿ ಪರೀಕ್ಷೆ ನಡೆಯಲಿದೆ. ಇಲ್ಲಿಯೂ ಐಚ್ಛಿಕ ವಿಷಯಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಶೇ.100ರಷ್ಟು ಪಠ್ಯದಲ್ಲಿ ಪರೀಕ್ಷೆ ನಡೆಯಲಿದೆ.

ದ್ವಿತೀಯ ಪಿಯು ಪರೀಕ್ಷಾ ವೇಳಾಪಟ್ಟಿ ಹೀಗಿದೆ

ಏ.16- ಗಣಿತ, ಶಿಕ್ಷಣ, ಬೇಸಿಕ್ ಗಣಿತ.
ಏ.18- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ.
ಏ.19– ಹೆಲ್ತ್ ಕೇರ್, ರೀಟೇಲ್, ಇನ್ಫಾರ್ಮೇಶನ್ ಟೆಕ್ನಾಲಜಿ.
ಏ.20- ಇತಿಹಾಸ, ಭೌತಶಾಸ್ತ್ರ
ಏ.21– ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಅರೇಬಿಕ್, ಫ್ರೆಂಚ್.
ಏ.22– ಲಾಜಿಕ್, ಬ್ಯುಸಿನೆಸ್ ಸ್ಟಡೀಸ್.
ಏ.23- ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ.
ಏ.25- ಅರ್ಥಶಾಸ್ತ್ರ
ಏ.26- ಹಿಂದಿ.
ಏ.28- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ.
ಏ.29- ಕನ್ನಡ.
ಏ.30– ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮೇ.2-ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮೇ.4- ಇಂಗ್ಲಿಷ್

Copyright © All rights reserved Newsnap | Newsever by AF themes.
error: Content is protected !!