February 21, 2026

Newsnap Kannada

The World at your finger tips!

WhatsApp Image 2022 01 22 at 3.59.51 PM

ಉಡುಪಿಯ ಕಾಂಗ್ರೆಸ್​ ನಾಯಕಿಗೆ ಚೂರಿ ಇರಿದ ದುಷ್ಕರ್ಮಿ : ಪ್ರಾಣಾಪಾಯದಿಂದ ಪಾರು

Spread the love

ಉಡುಪಿಯ ಕಾಪು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೀನಾ ಡಿಸೋಜಾ (35) ಅವರಿಗೆ ವ್ಯಕ್ತಿಯೋರ್ವ ಚೂರಿಯಿಂದ ಇರಿದು ಹಲ್ಲೆ ನಡೆಸಿದ್ದಾನೆ.

ಗಾಯಾಳು ಮಹಿಳೆಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಡಿತದ ಚಟ ಹೊಂದಿದ್ದ ನೆರೆಮನೆಯ ಸುಮಾರು 45 ವರ್ಷದ ವ್ಯಕ್ತಿ ಕ್ಷುಲ್ಲಕ ಕಾರಣಗಳಿಗಾಗಿ ಈ ಕೃತ್ಯವೆಸಗಿದ್ದಾನೆ.

ರೀನಾ ಇನ್ನೋರ್ವ ಮಹಿಳೆಯೊಂದಿಗೆ ತನ್ನ ಮನೆ ಬಳಿ ಮಾತನಾಡುತ್ತಿದ್ದಾಗ ಏಕಾಏಕಿ ಬಂದ ವ್ಯಕ್ತಿ ಹೊಟ್ಟೆಗೆ ಚಾಕುವಿನಿಂದ ಇರಿದಿದ್ದಾನೆ. ರೀನಾ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಘಟನೆ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!