ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ಹಾಗೂ ಡ್ರಗ್ಸ್ ಜಾಲದ ನಂಟು ಹೊಂದಿದ ಆರೋಪದ ನಿಮಿತ್ತ ನ್ಯಾಯಾಂಗ ಬಂಧನದಲ್ಲಿದ್ದ ರಿಯಾ ಚಕ್ರವರ್ತಿಗೆ ಬಾಂಬೆ ಹೈಕೋರ್ಟ್ ಷರತ್ತುಬದ್ಧ ಜಾಮೀನನ್ನು ಮಂಜೂರು ಮಾಡಿದೆ.
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಹಿಂದೆ ರಿಯಾ ಕೈವಾಡವಿದೆ ಎಂಬ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿತ್ತು. ಬಂಧನದಲ್ಲಿದ್ದ ವೇಳೆಯಲ್ಲಿಯೇ ಅವರು ಡ್ರಗ್ಸ್ ಜಾಲದ ನಂಟುಹೊಂದಿತುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಅದರ ಜೊತೆಗೆ ಸ್ವತಃ ರಿಯಾ ಅವರೇ ತಾವು ಡ್ರಗ್ಸ್ ನೀಡುತ್ತಿದ್ದುದಾಗಿ ಒಪ್ಪಿಕೊಂಡಿದ್ದರು.
ಈಗ ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್ ಷರತ್ತುಬದ್ಧ ಜಾಮಿನನ್ನು ರಿಯಾ ಅವರಿಗೆ ನೀಡಿದೆ.
More Stories
ಪೆಟ್ರೋಲ್ GST ವ್ಯಾಪ್ತಿಗೆ ಸೇರಿಸುವ ಕುರಿತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಹತ್ವದ ಸ್ಪಷ್ಟನೆ
ಐಶ್ವರ್ಯಗೌಡ ವಂಚನೆ ಪ್ರಕರಣ: ಶಾಸಕ ನರೇಂದ್ರಸ್ವಾಮಿಯ ಕೈವಾಡ ಶಂಕೆ, ಅನ್ನದಾನಿಯ ಗಂಭೀರ ಆರೋಪ
ಹೊಸ ವರ್ಷದ ಸಂಭ್ರಮ: KSBCLನಿಂದ ಒಂದೇ ದಿನ 308 ಕೋಟಿ ರೂ. ಮದ್ಯ ಮಾರಾಟ