ಮದುವೆ ಆಗುವಂತೆ ಒತ್ತಾಯಿಸಿ ನಾದಿನಿಯನ್ನು ಭಾವನೇ ಅಪಹರಣ ಮಾಡಿರುವ ಘಟನೆ ಬೆಂಗಳೂರಿನ ಕೊಡುಗೆಹಳ್ಳಿಯಲ್ಲಿ ಜರುಗಿದೆ.ದೇವರಾಜ್ ಎಂಬಾತ ಪತ್ನಿಯ ಸಹೋದರಿಯನ್ನೇ ಕಿಡ್ನ್ಯಾಪ್ ಮಾಡಿದ್ದಾನೆ ಎಂದು ಹೇಳಲಾಗಿದೆ.
ಅಕ್ಕನನ್ನು ಮದುವೆಯಾಗಿದ್ದ ದೇವರಾಜ್ ಬಳಿಕ ತಾನು ತಂಗಿಯನ್ನು ಪ್ರೀತಿಸುತ್ತಿದ್ದೀನಿ ಅಂತ ಆಕೆಯ ಹಿಂದೆ ಬಿದ್ದಿದ್ದನಂತೆ. ಆದರೆ ದೇವರಾಜ್ ಪ್ರೀತಿಯನ್ನು ಯುವತಿ ನಿರಾಕರಿಸಿದ್ದಳಂತೆ. ಈ ಹಿನ್ನೆಲೆಯಲ್ಲಿ ಯುವತಿಯನ್ನು ಕಿಡ್ನ್ಯಾಪ್ ಮಾಡಿ ಬಲವಂತವಾಗಿ ಮದುವೆಯಾಗಲು ಯತ್ನಿಸಿದ್ದಾನೆ ಎಂದು ಕುಟುಂಬಸ್ಥರು ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ಮಾಡಿದ್ದ ಪೊಲೀಸರು, ಯುವತಿಯನ್ನು ರಕ್ಷಣೆ ಮಾಡಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿ ದೇವರಾಜ್ ಜೊತೆಗೆ ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪದ ಅಡಿ ಆತನ ಸಹಚರರಾದ ನವೀನ್, ಕುಮಾರ್ ರನ್ನು ಪೊಲೀಸರು ಬಂಧಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ