February 21, 2026

Newsnap Kannada

The World at your finger tips!

WhatsApp Image 2022 01 25 at 11.11.12 AM

ಮಹಾರಾಷ್ಟ್ರ ಬಿಜೆಪಿ ಶಾಸಕನ ಪುತ್ರ ಸೇರಿ 7 ವೈದ್ಯಕೀಯ ವಿದ್ಯಾರ್ಥಿಗಳ ದುರಂತ ಸಾವು

Spread the love

ಬಿಜೆಪಿ ಶಾಸಕನ ಪುತ್ರ ಸೇರಿದಂತೆ 7 ವೈದ್ಯಕೀಯ ವಿದ್ಯಾರ್ಥಿಗಳು ಕಾರು ಅಪಘಾತದಲ್ಲಿ ದುರಂತ ಸಾವನ್ನಪ್ಪಿದ ಘಟನೆ ಮಾಹಾರಾಷ್ಟ್ರದಲ್ಲಿ ಕಳೆದ ರಾತ್ರಿ ಜರುಗಿದೆ.

ಮಹಾರಾಷ್ಟ್ರದ ಸೆಲ್ಸೂರ ಬಳಿ ಬ್ರಿಡ್ಜ್ ನಿಂದ ಕಾರು ಕೆಳಗೆ ಬಿದ್ದ ಪರಿಣಾಮ ಬಿಜೆಪಿ ಶಾಸಕ ವಿಜಯ್ ರಹಾಂಗದಲೆ ಅವರ ಪುತ್ರ ಆವಿಷ್ಕಾರ್ ರಹಾಂಗದಲೆ ಸೇರಿದಂತೆ ಏಳು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.

ಮಹೀಂದ್ರಾ  XUV 500 ಕಾರಿನಲ್ಲಿ ಆವಿಷ್ಕಾರ್ ಮತ್ತು ಆತನ ಸ್ನೇಹಿತರು ಡಿಯೋಲಿಯಿಂದ ವಾರ್ಧಾಗೆ ತೆರಳುತ್ತಿದ್ದರು. ಈ ವೇಳೆ ಇವರ ಕಾರಿಗೆ ಕಾಡು ಹಂದಿ ಡಿಕ್ಕಿ ಹೊಡೆದಿದೆ, ನಂತರ ಚಾಲಕ ನಿಯಂತ್ರಣ ತಪ್ಪಿದ್ದಾನೆ. ಪರಿಣಾಮ ಕಾರು ಬ್ರಿಡ್ಜ್ ನಿಂದ ಕೆಳಗೆ ಬಿದ್ದು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

ಪೊಲೀಸ್ ವರಿಷ್ಠಾಧಿಕಾರಿ ಪ್ರಶಾಂತ್ ಹೋಳ್ಕರ್ ಮಾತನಾಡಿ, ವಿದ್ಯಾರ್ಥಿಗಳು ಪರೀಕ್ಷೆ ಬರೆದು, ಪಾರ್ಟಿ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ನಿನ್ನೆ ರಾತ್ರಿ 11.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಹೇಳಿದ್ದಾರೆ.

error: Content is protected !!