ಕೃಷಿಗಾಗಿ ಸತತ 5 ತಿಂಗಳಿನಿಂದ ಏಕಾಂಗಿಯಾಗಿ ಬಾವಿ ತೋಡಿದ ಎಂಟೆಕ್ ಪದವೀಧರರೊಬ್ಬರು ನೀರು ತಂದು ಆಧುನಿಕ ಭಗೀರಥ ಎನಿಸಿಕೊಂಡಿದ್ದಾರೆ.
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಸೂರ್ಯಕಾಂತ್ ಪ್ರಭು ಎಂಟೆಕ್ ಓದಿದ್ದಾರೆ. 25/30 ವಿಸ್ತೀರ್ಣದ 14 ಅಡಿ ಬಾವಿಯನ್ನು ಬಬ್ಬರೇ ತೋಡಿ ನೀರು ತೆಗೆದಿದ್ದಾರೆ.
ಎಂಟೆಕ್ ಮಾಡಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸೂರ್ಯಕಾಂತ್ ಲಾಕ್‍ಡೌನ್ ವೇಳೆ ಕೃಷಿಯಲ್ಲಿ ಏನಾದರೂ ಸಾಧನೆ ಮಾಡಬೇಕು ಎಂಬ ಛಲದಿಂದ ಈ ಸಾಧನೆ ಮಾಡಿದ್ದಾರೆ.
ಮೊದ ಮೊದಲು ಈ ಪದವೀಧರನ ಸಾಹಸ ನೋಡಿ ಗ್ರಾಮಸ್ಥರು ಹುಚ್ಚು ಎನ್ನುತ್ತಿದ್ದರು. ಈಗ ಅದೇ ಗ್ರಾಮಸ್ಥರು ಅವರ ಬಾವಿಯಿಂದ ನೀರು ತೆಗೆದುಕೊಂಡು ಹೋಗುತ್ತಿದ್ದಾರೆ.
ಬಾವಿ ನೀರಿನಿಂದ 400 ಗಡಿಗಳನ್ನು ಬೆಳಸಿರುವ ಸೂರ್ಯಕಾಂತ್ ಛಲಕ್ಕೆ ಜಿಲ್ಲೆಯ ಜನರು ಜೈ ಅನ್ನುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು