ಕಳ್ಳನೊಬ್ಬ ಪೊಲೀಸ್ ಠಾಣೆಯಲ್ಲಿ ನಿಂತಿದ್ದ ಪೊಲೀಸರ ವಾಹನವನ್ನೇ ಕದ್ದ ಘಟನೆ ಧಾರವಾಡದ ಅಣ್ಣಿಗೆರೆ ಯಲ್ಲಿ ಜರುಗಿದೆ
ಅಣ್ಣಿಗೇರಿ ನಗರದ ನಾಗಪ್ಪ ಹಡಪದ ಬಂಧಿತ ಆರೋಪಿ.
ನಾಗಪ್ಪ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ನಿಂತಿದ್ದ ಬೋಲೆರೊ ವಾಹನವನ್ನು ಕಳ್ಳತನ ಮಾಡಿದ್ದಾನೆ.
ನಂತರ ಅದನ್ನು ಹಾವೇರಿ ಜಿಲ್ಲೆಯ ಬ್ಯಾಡಗಿವರೆಗೆ ತೆಗೆದುಕೊಂಡು ಹೋಗಿದ್ದಾನೆ.
ನಿನ್ನೆ ಬೆಳಗಿನ ಜಾವ 4 ಗಂಟೆಗೆ ವಾಹನ ತೆಗೆದುಕೊಂಡು ಪರಾರಿಯಾಗಿದ್ದ ನಾಗಪ್ಪ ಬ್ಯಾಡಗಿವರೆಗೆ ಹೋಗಿರುವ ವಿಷಯವನ್ನು ಪೊಲೀಸರು ತಿಳಿದಿದ್ದಾರೆ.
ಆತನೂ ಸೇರಿದಂತೆ ವಾಹನವನ್ನು ಬ್ಯಾಡಗಿಯಲ್ಲೇ ಹಿಡಿದಿದ್ದಾರೆ. ಸದ್ಯ ಪೊಲೀಸರು ಬ್ಯಾಡಗಿಯಿಂದ ಪೊಲೀಸ್ ಜಿಪ್ ಹಾಗೂ ನಾಗಪ್ಪನನ್ನು ಕರೆತಂದು ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ