March 13, 2026

Newsnap Kannada

The World at your finger tips!

ashokrao

ಕನ್ನಡದ ಹಿರಿಯ ಪೋಷಕ ನಟ ಅಶೋಕ್ ರಾವ್ ಇನ್ನಿಲ್ಲ

Spread the love

ಕ್ಯಾನ್ಸರ್ ನಿಂದ ಬಳಲುತ್ತಿದ್ದ ಸ್ಯಾಂಡಲ್​​ವುಡ್​ನ ಹಿರಿಯ ಪೋಷಕ ನಟ ಅಶೋಕ್ ರಾವ್ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾದರು.

ಬೆಂಗಳೂರಿನ ವಿದ್ಯಾರಣ್ಯಪುರದ ನಿವಾಸದಲ್ಲಿ ಅಶೋಕ್ ಅವರ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ.

ಕನ್ನಡದ ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಶೋಕ್ ನಟಿಸಿದ್ದರು. ಅಶೋಕ್ ಅವರು ಅವರ ಕಂಚಿನ ಕಂಠದಿಂದಲೇ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು.

ನಟ ಅಶೋಕ್ ರಾವ್ ಪತ್ನಿ, ಮಗ ಹಾಗೂ ಸೊಸೆಯನ್ನು ಅಗಲಿದ್ದಾರೆ.

ಅಣ್ಣಾವ್ರೇ ಕರೆದು ಪರಶುರಾಮ ಚಿತ್ರದಲ್ಲಿ ಖಳನಾಯಕನ ಪಾತ್ರ ಮಾಡಿಸಿದ್ದರು. ಪರಶುರಾಮ ಸಿನಿಮಾ ಇವರಿಗೆ ಒಳ್ಳೆಯ ಹೆಸರನ್ನು ತಂದು ಕೊಟ್ಟಿತ್ತು.

error: Content is protected !!