February 21, 2026

Newsnap Kannada

The World at your finger tips!

shashi

ಜಯಲಲಿತಾ ಆಪ್ತೆ ಶಶಿಕಲಾಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿದ ಪೊಲೀಸರ ವಿರುದ್ದ ಚಾರ್ಜ್‍ಶೀಟ್

Spread the love

ಅಕ್ರಮ ಆಸ್ತಿ ಸಂಬಂಧ ಜೈಲು ಶಿಕ್ಷೆ ಅನುಭವಿಸಿ ಹೊರ ಬಂದಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾರ ಆಪ್ತೆ ಶಶಿಕಲಾರಿಂದ ಇದೀಗ ಜೈಲು ಅಧಿಕಾರಿಗಳಿಗೆ ಸಂಕಷ್ಟ ಎದುರಾಗಿದೆ.

4 ವರ್ಷ ಪರಪ್ಪನ ಅಗ್ರಹಾರ ಜೈಲಿನಲ್ಲಿ ಜೈಲು ಶಿಕ್ಷೆ ಅನುಭವಿಸಿದ ವೇಳೆ ಶಶಿಕಲಾಗೆ ಜೈಲಿನಲ್ಲಿದ್ದ ಜೈಲು ಅಧಿಕಾರಿಗಳು ರಾಜಾತಿಥ್ಯ ನೀಡಲು ಲಂಚ ಪಡೆದ ಆರೋಪ ಕೇಳಿಬಂದಿತ್ತು.

ಈ ಬಗ್ಗೆ ತನಿಖೆ ನಡೆಸಿದ ಎಸಿಬಿ ಹೈಕೋರ್ಟ್‍ಗೆ ಚಾರ್ಜ್‍ಶೀಟ್ ಸಲ್ಲಿಸಿದೆ.

ಶಶಿಕಲಾ ಜೈಲಿನಲ್ಲಿದ್ದಾಗ ಜೈಲು ಅಧಿಕಾರಿಗಳಾಗಿದ್ದ, ಕೃಷ್ಣ ಕುಮಾರ್, ಡಾ. ಅನಿತಾ ಆರ್, ಬಿ.ಎಸ್.ಸುರೇಶ್, ಗಜರಾಜ ಮಕನೂರು, ಇಳವರಸಿ, ಶಶಿಕಲಾಗೆ ರಾಜಾತಿಥ್ಯ ನೀಡಿದ್ದಾರೆ ಎಂದು ಚಾರ್ಜ್‍ಶೀಟ್‍ನಲ್ಲಿ ಆರೋಪಿಸಲಾಗಿದೆ.

ಪೊಲೀಸರು ಲಂಚ ಪಡೆದಿದ್ದಾರೆ ಎಂಬ ಬಗ್ಗೆ ದೂರು ದಾಖಲಿಸಿದ ಬಳಿಕ ಎಸಿಬಿ ಅಧಿಕಾರಿಗಳು ತನಿಖೆ ವಿಳಂಬ ಮಾಡುತ್ತಿದ್ದಾರೆ ಎಂದು ಕೆ.ಎಸ್.ಗೀತಾ ಪಿಐಎಲ್ ಸಲ್ಲಿಸಿದ್ದರು. ಇದೀಗ ಎಸಿಬಿ ಅಧಿಕಾರಿಗಳು ತನಿಖೆ ಪೂರ್ಣಗೊಳಿಸಿ ಶಶಿಕಲಾ, ಜೈಲು ಅಧಿಕಾರಿಗಳ ವಿರುದ್ಧ ಸರ್ಕಾರದ ಪೂರ್ವಾನುಮತಿ ಪಡೆದು, ಭ್ರಷ್ಟಾಚಾರ ತಡೆ ಕಾಯ್ದೆ ಸೆ.19ರಡಿ ಎಸಿಬಿ ಚಾರ್ಜ್‍ಶೀಟ್ ಹಾಕಿದೆ ಎಂದು ಹೈಕೋರ್ಟ್‍ಗೆ ಎಸಿಬಿ ಪರ ವಕೀಲ ಪಿ.ಎನ್.ಮನಮೋಹನ್ ಹೇಳಿಕೆ ನೀಡಿದ್ದಾರೆ.

error: Content is protected !!