ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ನಡೆದಿದೆ, ಶಾರ್ಟ್ ಸರ್ಕ್ಯೂಟ್ನಿಂದ ಕಳೆದ ರಾತ್ರಿ 2.30 ರ ವೇಳೆಗೆ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಸಿಲಿಂಡರ್ ಸ್ಫೋಟಗೊಂಡು ಹೊತ್ತಿ ಉರಿದ ಘಟನೆ ನಡೆದಿದೆ.
ಬೆಂಗಳೂರಿನ ವಿವೇಕನಗರದ ಹೊನ್ನಾರ್ ಪೇಟ್ನಲ್ಲಿರುವ ಗ್ಯಾರೇಜ್ನಲ್ಲಿ ಈ ಅವಘಡ ನಡೆದಿದೆ.
ಬೆಂಕಿಯ ಕೆನ್ನಾಲಿಗೆಗೆ ಕಾರು ಗ್ಯಾರೇಜ್ ಸಂಪೂರ್ಣ ಭಸ್ಮವಾಗಿದೆ. ಗ್ಯಾರೇಜ್ನಲ್ಲಿರುವ 3 ಬೈಕ್, 4 ಕಾರು ಬೆಂಕಿಗಾಹುತಿಯಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ನಾಸೀರ್ ಎಂಬುವವರ ಮಾಲೀಕತ್ವದ ಗ್ಯಾರೇಜ್ ಇದಾಗಿತ್ತು. ಬೆಂಕಿ ಹೊತ್ತಿಕೊಂಡ ಪರಿಣಾಮ ಗ್ಯಾರೇಜ್ನಲ್ಲಿದ್ದ 2 ಸಿಲಿಂಡರ್ ಕೂಡ ಸ್ಫೋಟಗೊಂಡಿದೆ.
ಸ್ಫೋಟದ ಭೀಕರತೆಗೆ ನಗರದ ಜನ ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿನಂದಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ