February 23, 2026

Newsnap Kannada

The World at your finger tips!

latha mangeshwar

ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ತೀವ್ರ ಗಂಭೀರ: ವೈದ್ಯರು

Spread the love

ಭಾರತದ ಕೋಗಿಲೆ, ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಅವರ ಸ್ಥಿತಿ ಗಂಭೀರವಾಗಿದೆ  ಎಂದು ಚಿಕಿತ್ಸೆ ನೀಡುತ್ತಿದ್ದ ವೈದ್ಯರು ಮಾಹಿತಿ ನೀಡಿದ್ದಾರೆ.

ಕಳೆದೊಂದು ತಿಂಗಳಿನಿಂದ ಮುಂಬೈನ ಆಸ್ಪತ್ರೆಯ ಐಸಿಯುನಲ್ಲಿ ದಾಖಲಾಗಿರುವ ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರ ಸ್ಥಿತಿ ಗಂಭೀರವಾಗಿದೆ.

ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯರ ಹೇಳಿಕೆಯ ಪ್ರಕಾರ, ಅವರ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿದೆ ಎಂದು ಮಾಹಿತಿ ಕೊಟ್ಟಿದ್ದಾರೆ.

ಡಾ ಪ್ರತೀತ್ ಸಮ್ದಾನಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿದ್ದು, ಅವರು ಗಂಭೀರರಾಗಿದ್ದಾರೆ. ಅವರನ್ನು ವೆಂಟಿಲೇಟರ್‌ನಲ್ಲಿರಿಸಲಾಗಿದೆ. ಅವರ ಆರೋಗ್ಯದ ಬಗ್ಗೆ ವೈದ್ಯರ ತಂಡ ನಿಗಾವಹಿಸಿದೆ ಎಂದು ಹೇಳಿದ್ದಾರೆ.

error: Content is protected !!