February 23, 2026

Newsnap Kannada

The World at your finger tips!

jems p

ಫೆ.11ಕ್ಕೆ ಜೇಮ್ಸ್ ಸಿನಿಮಾದ ಟೀಸರ್ ಬಿಡುಗಡೆ – ಅಶ್ವಿನಿ ಪುನೀತ್

Spread the love

ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ದಿ. ಪುನೀತ್ ರಾಜ್‍ಕುಮಾರ್ ಅಭಿನಯದ ಬಹು ನಿರೀಕ್ಷಿತ ಜೇಮ್ಸ್ ಸಿನಿಮಾದ ಟೀಸರ್ ಅನ್ನು ಫೆ11 ರಂದು ಬಿಡುಗಡೆ ಘೋಷಣೆಮಾಡಿರುವ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.

ಪುನೀತ್ ಅಗಲಿಕೆಗೂ ಮುನ್ನ ಕೊನೆದಾಗಿ ಅಭಿನಯಿಸಿರುವ ಸಿನಿಮಾ ಜೇಮ್ಸ್ ಈ ಸಿನಿಮಾ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಇತ್ತೀಚೆಗಷ್ಟೇ ಜೇಮ್ಸ್ ಸಿನಿಮಾದ ಪೋಸ್ಟರ್ ರಿವೀಲ್ ಮಾಡಿ ಚಿತ್ರತಂಡ ಭಾರೀ ಸದ್ದು ಮಾಡಿತ್ತು. ಇದೀಗ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಜೇಮ್ಸ್ ಸಿನಿಮಾದ ಟೀಸರ್ ಬಿಡುಗಡೆ ದಿನಾಂಕವನ್ನು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕಾರಿನ ಮೇಲೆ ಜೆ ಎಂದು ಸಿಂಬಲ್ ಇರುವ ಫೋಟೋವನ್ನು ಶೇರ್ ಮಾಡಿಕೊಂಡಿರುವ ಅಶ್ವಿನಿ ಫೆಬ್ರವರಿ 11 ರಂದು ಬೆಳಿಗ್ಗೆ 11.11 ಕ್ಕೆ ಜೇಮ್ಸ್ ಅಧಿಕೃತ ಟೀಸರ್ ಬಿಡುಗಡೆಯಾಗಲಿದೆ ಎಂದು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದಾರೆ.

ಇತ್ತೀಚೆಗಷ್ಟೇ ಜೇಮ್ಸ್ ಸಿನಿಮಾಕ್ಕೆ ನಟ ಶಿವರಾಜ್ ಕುಮಾರ್ ವಾಯ್ಸ್ ಡಬ್ಬಿಂಗ್ ನೀಡುತ್ತಿದ್ದಾರೆ ಎಂದು ಚಿತ್ರತಂಡ ಬಹಿರಂಗಪಡಿಸಿದೆ.

error: Content is protected !!