ಅಪ್ರಾಪ್ತ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಚೊಟ್ಟನಹಳ್ಳಿ ಮತ್ತು ಆಲದಹಳ್ಳಿ ಗ್ರಾಮಗಳಲ್ಲಿ ಜರುಗಿದೆ.
ಚೊಟ್ಟನಹಳ್ಳಿಯ ರಶ್ಮಿ (17) ಮತ್ತು ಆಲದಹಳ್ಳಿಯ ಶಶಾಂಕ್ (17) ಮೃತ ಪ್ರೇಮಿಗಳು. ಇಬ್ಬರ ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ
ಮಳವಳ್ಳಿಯ ಶಾಂತಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಶಶಾಂಕ್ ಮತ್ತು ರಶ್ಮಿ, ಪರಸ್ಪರ ಪ್ರೀತಿಸುತ್ತಿದ್ದರು.
ನಿನ್ನೆ ಸಂಜೆ ಚೊಟ್ಟನಹಳ್ಳಿಯ ಮನೆಯಲ್ಲಿ ನೇಣು ಬಿಗಿದುಕೊಂಡು ರಶ್ಮಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ರಶ್ಮಿ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಶಶಾಂಕ್ ಆಲದಹಳ್ಳಿಯಲ್ಲಿ ವಿಷ ಸೇವಿಸಿದ್ದಾನೆ.
ಕೂಡಲೇ ಅಸ್ವಸ್ಥ ಶಶಾಂಕ್ನನ್ನು ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಮಳವಳ್ಳಿ ಗ್ರಾಮಾಂತರ ಪೊಲೀಸ್ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ