ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮುಖಕ್ಕೆ ವ್ಯಕ್ತಿಯೊಬ್ಬ ಕಾಂಗ್ರೆಸ್ ಪಕ್ಷದ ಧ್ವಜವನ್ನು ಎಸೆದ ಘಟನೆ ಪಂಜಾಬ್ನ ಲುಧಿಯಾನದಲ್ಲಿಂದು ಜರುಗಿದೆ.
ಭದ್ರತಾ ಲೋಪದಲ್ಲಿ ಅವರ ಮುಖಕ್ಕೆ ಧ್ವಜ ಹಾಕಲಾಗಿದೆ. ರಾಹುಲ್ ಗಾಂಧಿ ಕುಳಿತಿದ್ದ ಕಾರನ್ನು ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಸುನಿಲ್ ಜಾಖರ್ ಓಡಿಸುತ್ತಿದ್ದರು. ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಮತ್ತು ಪಕ್ಷದ ರಾಜ್ಯ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಕಾರಿನ ಹಿಂದಿನ ಸೀಟುಗಳಲ್ಲಿ ಕುಳಿತಿದ್ದರು.
ರಾಹುಲ್ ಗಾಂಧಿ ಕಾರಿನ ಮುಂದಿನ ಸೀಟಿನಲ್ಲಿ ಕುಳಿತಿದ್ದು ತಮ್ಮ ಪಕ್ಷದ ಬೆಂಬಲಿಗರನ್ನು ಸ್ವಾಗತಿಸಲು ಅವರ ಕಿಟಕಿ ತೆರೆದಿತ್ತು. ಈ ಸಂದರ್ಭದಲ್ಲಿ ವ್ಯಕ್ತಿಯೊಬ್ಬನು ರಾಹುಲ್ ಅವರ ಕಿಟಕಿಯ ಮೇಲೆ ಬಹಳ ದೂರದಿಂದ ಧ್ವಜವನ್ನು ಎಸೆದಿದ್ದಾನೆ.
ಪಂಜಾಬ್ನಲ್ಲಿ ಇದು ಎರಡನೇ ಭದ್ರತಾ ಲೋಪವಾಗಿದೆ. ಕೆಲವು ದಿನಗಳ ಹಿಂದೆ, ಪ್ರಧಾನಿ ನರೇಂದ್ರ ಮೋದಿ ಅವರ ಕಾರು 20 ನಿಮಿಷಗಳ ಕಾಲ ಫ್ಲೈಓವರ್ ನಲ್ಲಿ ಸಿಲುಕಿಕೊಂಡಿತ್ತು.
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
- ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ