ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಂದು ಬೆಳಗ್ಗೆ ಆಂಧ್ರಪ್ರದೇಶದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಈ ವರ್ಷದ ಮೊದಲ ‘ರಾಡಾರ್ ಇಮೇಜಿಂಗ್ ಉಪಗ್ರಹ’ ಭೂ ವೀಕ್ಷಣಾ ಉಪಗ್ರಹ (EOS-04) ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ.
ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಬೆಳಗ್ಗೆ 5:59ಕ್ಕೆ ಉಡಾವಣೆಯಾಗಿದೆ.
ಇದರ ಜೊತೆಗೆ ಎರಡು ಸಹ ಪ್ರಯಾಣಿಕ ಉಪಗ್ರಹವನ್ನೂ PSLV ಹೊತ್ತೊಯ್ದಿದೆ.
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸ್ಪೇಸ್ ಸೈನ್ಸ್ ಅಂಡ್ ಟೆಕ್ನಾಲಜಿ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿರುವ INSPIRE sat-1, ಬೌಲ್ಡರ್‌ನ ಕೊಲೊರಾಡೋ ವಿಶ್ವವಿದ್ಯಾಲಯದ ವಾಯುಮಂಡಲ ಮತ್ತು ಬಾಹ್ಯಾಕಾಶ ಭೌತಶಾಸ್ತ್ರದ ಪ್ರಯೋಗಾಲಯದ ಸಹಯೋಗದೊಂದಿಗೆ ನಿರ್ಮಿಸಿರುವ ಉಪಗ್ರಹಗಳನ್ನು PSLV-C52 ಹೊತ್ತೊಯ್ದಿದೆ.
ಪಿಎಸ್‌ಎಲ್‌ವಿ ಮೂಲಕ ಇಸ್ರೋ, ಭೂ ವೀಕ್ಷಣಾ ಉಪಗ್ರಹ (ಇಒಎಸ್-04) ಅನ್ನು ಬಾಹ್ಯಾಕಾಶಕ್ಕೆ ಕಳುಹಿಸಿದೆ. ಇದನ್ನು ರಾಡಾರ್ ಇಮೇಜಿಂಗ್ ಉಪಗ್ರಹ ಎಂದು ಕರೆಯಲಾಗುತ್ತದೆ.
ಇದು ಭೂಮಿಯ ಮೇಲ್ಮೈಯ ನಿಖರವಾದ ಚಿತ್ರವನ್ನು ಇಸ್ರೋಗೆ ಕಳುಹಿಸುತ್ತದೆ.
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ