ಹುಟ್ಟಿದ 6 ತಿಂಗಳಿಗೆ ಮಗು ಸಾವನ್ನಪ್ಪಿದ ಕಾರಣ ಮನನೊಂದು ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಎಸ್.ಜಿ ಪಾಳ್ಯದ ತಾವರೆಕೆರೆಯಲ್ಲಿ ಜರುಗಿದೆ
ಮಂಡ್ಯ ನಾಗಮಂಗಲ ಮೂಲದ ಪಲ್ಲವಿ ಆತ್ಮಹತ್ಯೆಗೆ ಶರಣಾದ ತಾಯಿ.
ಸಿದ್ದು ಎಂಬಾತನ ಜೊತೆ ಕಳೆದ ನಾಲ್ಕು ವರ್ಷಗಳಿಂದ ಪಲ್ಲವಿ ವಿವಾಹವಾಗಿತ್ತು. ಬಳಿಕ ಗರ್ಭಿಣಿಯಾದ ಆಕೆಗೆ ಗರ್ಭಪಾತವಾಗಿತ್ತು.
ಆ ಬಳಿಕ ಹಲವು ದೇವರಿಗೆ ಹರಕೆ ಹೊತ್ತು ಗರ್ಭಿಣಿಯಾಗಿದ್ದರು. ಆದರೆ ಹುಟ್ಟಿದ ಮಗುವಿಗೆ ಹೃದಯದಲ್ಲಿ ರಂದ್ರ ಇರುವುದು ಪತ್ತೆಯಾಗಿದೆ.
ಸಿದ್ದು ಆಸ್ಪತ್ರೆಯೊಂದರಲ್ಲಿ ಕೆಲಸಕ್ಕಿದ್ದರು ಅದೇ ಆಸ್ಪತ್ರೆಯಲ್ಲಿ ಮಗು ಬದುಕಿಸಲು ಪ್ರಯತ್ನ ಪಟ್ಟಿದ್ದರು.
ಆದರೆ ನಿನ್ನೆ ಬೆಳಗ್ಗೆ ಮನೆಯಲ್ಲಿ ಮಲಗಿದ್ದ ವೇಳೆ ಮಗು ಸಾವನ್ನಪ್ಪಿದೆ. ಬಳಿಕ ಮಗು ಕಳೆದುಕೊಂಡ ನೋವಿನಲ್ಲಿ ಡೆತ್ ನೋಟ್ ಬರೆದಿಟ್ಟು ಪಲ್ಲವಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸಿದ್ದು ಎಂದಿನಂತೆ ಕೆಲಸಕ್ಕೆ ತೆರಳಿದ್ದರು ಬಳಿಕ ಸಂಜೆ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ನಂತರ ಪೊಲೀಸರಿಗೆ ಮಾಹಿತಿ ತಿಳಿಸದೆ ಊರಿಗೆ ಮೃತದೇಹಗಳನ್ನು ಕರೆದುಕೊಂಡು ಹೋಗಲು ಮುಂದಾಗಿದ್ದರು.
ಈ ವೇಳೆ ಮೃತರ ಕುಟುಂಬಸ್ಥರು ಆಕ್ಷೇಪವೆತ್ತಿ ಸಾವಿನ ಹಿಂದೆ ಕೊಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಸುದ್ದಗುಂಟೆ ಪಾಳ್ಯ ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಕುಟುಂಬಸ್ಥರ ಮಾಹಿತಿ ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು