ರಾಜ ರಾಜೇಶ್ವರಿ ನಗರ ಕ್ಷೇತ್ರದಿಂದ ಕುಸುಮಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಎಚ್ ಕುಸುಮಾ ಸಾಮಾಜಿಕ ಜಾಲತಾಣದಲ್ಲಿ
ವ್ಯಕ್ಕಿಗತ ವಿವರ ಹಂಚಿಕೊಂಡಿದ್ದಾರೆ.
ಜೊತೆಗೆ ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷದ ವಿಜಯ ಪತಾಕೆ ಹಾರುವಂತೆ ಮಾಡುವ ಜವಾಬ್ದಾರಿ ನನ್ನದು’ ಎಂದು ಸ್ಟೇಟಸ್ ಹಾಕಿದ್ದಾರೆ.
ಕುಸುಮಾ ಬಯೋಡೆಟಾ ಇಲ್ಲಿದೆ
ಕುಸುಮಾ ಉನ್ನತ ಶಿಕ್ಷಣವನ್ನು ಪಡೆದು ರಾಜಕೀಯಕ್ಕೆ ಧುಮುಕಿದವರು. ಯುವ ಶಕ್ತಿ ರಾಜಕೀಯಕ್ಕೆ ಬರಬೇಕು ಎಂಬ ಕೂಗಿನ ಹಿನ್ನೆಲೆಯಲ್ಲಿ ಪ್ರಸ್ತುತ ಯುವ ಸಮುದಾಯಕ್ಕೆ ಮಾದರಿಯಾಗಿದ್ದಾರೆ. ಜೊತೆಗೆ ಅವರ ತಂದೆಯವರೂ ಸಹ ರಾಜಕೀಯದಲ್ಲಿರುವುದು ಅವರಿಗೆ ಸಕಾರಾತ್ಮಕ ಅಂಶ.
ಕುಸುಮಾ ಅವರು ಜನಿಸಿದ್ದು ಜೂನ್ 6, 1989. ಪ್ರಸ್ತುತ ಕಾಂಗ್ರೆಸ್ ಸದಸ್ಯ, ಮಾಜಿ ಜೆಡಿಎಸ್ ಮುಖಂಡ ಹನುಮಂತರಾಯಪ್ಪ ಇವರ ತಂದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಬೆಂಗಳೂರಿನ ವಿದ್ಯಾನಿಕೇತನ ಶಾಲೆಯಲ್ಲಿ. ರಾಜಾಜಿ ನಗರದ ಕೆಎಲ್‌ಇ ಕಾಲೇಜಿನಲ್ಲಿ ಪಿಯುಸಿ ಪೂರ್ಣಗೊಳಿಸಿದ ಇವರು ಅಮೇರಿಕಾಕ್ಕೆ ತೆರಳಿ, ಯೂನಿವರ್ಸಿಟಿ ಆಫ್ ಮೆಸಾಚುಸೆಟ್ಸ್ ಬೋಸ್ಟನ್ ಯೂನಿವರ್ಸಿಟಿಯಲ್ಲಿ, ಮಾಹಿತಿ ತಂತ್ರಜ್ಞಾನ ವಿಷಯದಲ್ಲಿ ಎಮ್.ಎಸ್. ಸ್ನಾತಕೋತ್ತರ ಪದವಿಯನ್ನು ಪಡೆದರು.
ನಂತರ ಬೆಂಗಳೂರಿಗೆ ಹಿಂತಿರುಗಿದ ಕುಸುಮಾ, 2010ರಲ್ಲಿ ಡಾ. ಅಂಬೇಡ್ಕರ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಿಂದ ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ ಬಿ.ಇ. ಪದವಿ ಪಡೆದರು.
ಓದು ಮುಗಿಸಿದ ನಂತರ ಇವರು ಬೆಂಗಳೂರಿನ ದಯಾನಂದ ಸಾಗರ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕೆಲಸ ಮಾಡಿದರು. ಪ್ರಾಧ್ಯಾಪಕರಾಗಿದ್ದಗಿನಿಂದಲೇ ತಮ್ಮನ್ನು ಸಮಾಜ ಸೇವೆಯಲ್ಲಿ ತೊಡಗಿಗಿಕೊಂಡು 2016ರಿಂದ ‘ನಿರಾಂತಕ‘ ಸ್ವಯಂ ಸೇವಾ ಸಂಸ್ಥೆಯಲ್ಲಿ ಪ್ರವರ್ತಕರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ.
ನಿರಾತಂಕ ಸ್ವಯಂ ಸೇವಾ ಸಂಘದಲ್ಲಿ ನೊಂದ ವೃದ್ಧರಿಗೆ ಮತ್ತು ಮಹಿಳೆಯರ ಪರವಾಗಿ ಕಾರ್ಯ ನಿರ್ವಹಿಸಿರುವ ಕುಸುಮಾ ಅವರು ಈಗ ರಾಜಕೀಯ ಪ್ರವೇಶಿಸಿ ಜನ ಸೇವೆಗೆ ಮುಂದಾಗಿದ್ದಾರೆ.
More Stories
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ
2025ರಿಂದ ಕ್ಯಾನ್ಸರ್ ಲಸಿಕೆ ಉಚಿತ ವಿತರಣೆ: ಮಹತ್ವದ ವೈದ್ಯಕೀಯ ಸಾಧನೆ
ವಿರೋಧ ಲೆಕ್ಕಿಸದ ಮೋದಿ ಸರ್ಕಾರ