February 21, 2026

Newsnap Kannada

The World at your finger tips!

ajith

ಅಜಿತ್ ದೋವಲ್ ನಿವಾಸಕ್ಕೆ ಅಕ್ರಮ ಪ್ರವೇಶ – ವ್ಯಕ್ತಿ ಬಂಧನ

Spread the love

ನವದೆಹಲಿಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ನಿವಾಸಕ್ಕೆ ನುಗ್ಗಲು ಪ್ರಯತ್ನಿಸಿದ ವ್ಯಕ್ತಿಯನ್ನು ದೆಹಲಿ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ದೋವಲ್ ನಿವಾಸಕ್ಕೆ ಕಾರಿನಲ್ಲಿ ಪ್ರವೇಶಿಸಲು ಯತ್ನಿಸಿದ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿ ತಡೆದು ವಶಕ್ಕೆ ತೆಗೆದುಕೊಂಡಿದ್ದಾರೆ.

ವ್ಯಕ್ತಿ ಬಾಡಿಗೆ ಕಾರು ಚಲಾಯಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. 
ಬಂಧಿತ ವ್ಯಕ್ತಿ ತನ್ನೊಳಗೆ ಯಾರೋ ಚಿಪ್ ಅಳವಡಿಸಿದ್ದಾರೆ ಹಾಗೂ ತನ್ನನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ತನಿಖೆ ಸಮಯದಲ್ಲಿ ಪೊಲೀಸರಿಗೆ ತಿಳಿಸಿದ್ದಾನೆ.

ಆದರೆ ಈ ವ್ಯಕ್ತಿ ಮಾನಸಿಕ ಅಸ್ವಸ್ಥ ಎಂದು ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

error: Content is protected !!