ಹಿರಿಯ ನಟ ರಾಜೇಶ್ ಇನ್ನಿಲ್ಲ

Team Newsnap
1 Min Read

ಹಿರಿಯ ನಟ ರಾಜೇಶ್ (87) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ನಟ ರಾಜೇಶ್ ಕಿಡ್ನಿ ವೈಫಲ್ಯ ಹಾಗೂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ರಾಜೇಶ್ 150 ಚಿತ್ರಗಳಲ್ಲಿ ನಟಿಸಿದ್ದಾರೆ. ಓಲ್ಡ್ ಮಾಂಕ್ ಅವರ ಕಟ್ಟಕಡೆಯ ಸಿನಿಮಾ . ಮುನಿ ಚೌಡಪ್ಪ ಎಂಬ ಹೆಸರನ್ನು
ವಿದ್ಯಾ ಸಾಗರ್ ಎಂದು ರಂಗಭೂಮಿಯಲ್ಲಿ ಗುರುತಿಸಿಕೊಂಡು ಚಿತ್ರರಂಗದಲ್ಲಿ ರಾಜೇಶ್​ ಎಂದು ಕನ್ನಡ ಚಿತ್ರರಂಗಕ್ಕೆ ಪ್ರವೇಶ ಮಾಡಿದ್ದರು.

ಡಾ.ರಾಜ್ ಕುಮಾರ್, ವಿಷ್ಣುವರ್ಧನ್ ಅಂಬರೀಶ್ ಜೊತೆ ನಟಿಸಿರುವ ರಾಜೇಶ್​ ನಾಯಕ ನಟರಾಗಿಯೂ ಹೆಸರು ಮಾಡಿದ್ದರು.

ಅವರ ಕಲಾ ಸೇವೆಗೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಗೌರವ ಸಿಕ್ಕಿತ್ತು.

Share This Article
Leave a comment