ಶಿವಮೊಗ್ಗದಲ್ಲಿ ಇತ್ತೀಚಿಗೆ ಬರ್ಬರವಾಗಿ ಹತ್ಯೆಯಾಗಿದ್ದ ಭಜರಂಗದಳ ಕಾರ್ಯಕರ್ತ ಹರ್ಷ ನಿವಾಸಕ್ಕೆ ಶನಿವಾರ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಪತ್ನಿ ಜಯಲಕ್ಷ್ಮೀ, ಪುತ್ರ ಕಾಂತೇಶ್ ಭೇಟಿ ನೀಡಿ ಹರ್ಷ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ತಮ್ಮ ಕುಟುಂಬದಿಂದ ಕುಟುಂಬಕ್ಕೆ 10 ಲಕ್ಷದ ಚೆಕ್ ನೀಡಿ ನೆರವಾದರು.
ಮೊನ್ನೆ ಕೂಡ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಉಪಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಜೊತೆಗೆ ಬಿಜೆಪಿ ಪಕ್ಷದ ಕಡೆಯಿಂದ 10 ಲಕ್ಷ ರೂಪಾಯಿಗಳ ಚೆಕ್ ಅನ್ನು ಹರ್ಷ ಪೋಷಕರಿಗೆ ಹಸ್ತಾಂತರ ಮಾಡಿದ್ದರು.
ಸ್ವಾಮೀಜಿಗಳಿಂದ 1 ಲಕ್ಷ ರು :
ಹರ್ಷ ಕುಟುಂಬಕ್ಕೆ ಸಾಂತ್ವನ ಹೇಳಿ ಸ್ವಾಮೀಜಿಗಳ ನಿಯೋಗವು ಆರ್ಥಿಕ, ಧಾರ್ಮಿಕ, ಅಧ್ಯಾತ್ಮಿಕ ಆಶೀರ್ವಾದವನ್ನು ಮಾಡಿದ್ದೇವೆ. ಎಲ್ಲ ಧರ್ಮ-ಜಾತಿ ಜನರ ಅಂತರಂಗ ಮತ್ತು ಬಹಿರಂಗ ಮನಸ್ಸಿನಲ್ಲಿ ಶಾಂತಿ ನೆಲಸಬೇಕು. ಜನರು ಶಾಂತಿ ಸಹಬಾಳ್ವೆಯಿಂದ ಬದುಕಬೇಕಿದೆ ಎಂದರು. ಇದೇ ವೇಳೆ ಸ್ವಾಮೀಜಿಗಳಿಂದ ಹರ್ಷ ಕುಟುಂಬಕ್ಕೆ 1 ಲಕ್ಷ ಆರ್ಥಿಕ ನೆರವು ನೀಡಲಾಯಿತು.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ