ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಕ್ರೇಜಿಸ್ಟಾರ್ ರವಿಚಂದ್ರನ್ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ (83) ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಪಟ್ಟಮ್ಮಾಳ್ ವೀರಸ್ವಾಮಿ ಮೂವರು ಹೆಣ್ಣು ಮಕ್ಕಳು, ಇಬ್ಬರು ಗಂಡು ಮಕ್ಕಳು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಹಲವು ವರ್ಷಗಳಿಂದ ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು, ಕೆಲವು ದಿನಗಳಿಂದ ನಗರದ ಸುಗುಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ನಾಲ್ಕೈದು ವರ್ಷಗಳಿಂದ ಯಾರ ಜೊತೆಯೂ ಮಾತನಾಡದ ಅವರು, ಕೇವಲ ರವಿಚಂದ್ರನ್ ಧ್ವನಿಯನ್ನು ಮಾತ್ರ ಕಂಡು ಹಿಡಿಯುತ್ತಿದ್ದರು.
ನನ್ನಮ್ಮ ನನ್ನ ಗೆಲುವನ್ನು ಮತ್ತೊಮ್ಮೆ ನೋಡಿಯೇ ನಮ್ಮನ್ನು ಅಗಲುತ್ತಾರೆ ಎಂದು ರವಿಚಂದ್ರನ್ ಹೇಳುತ್ತಿದ್ದರು.
ಈಗ ತಾಯಿಯ ಅಗಲಿಕೆ ರವಿಚಂದ್ರನ್ ಹಾಗೂ ಕುಟುಂಬದವರನ್ನು ನೋವಿನ ಮಡುವಿಗೆ ನೂಕಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು