ಶಿವಮೊಗ್ಗದಲ್ಲಿ ಹತ್ಯೆಗೀಡಾದ ಭಜರಂಗದಳದ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂಪಾಯಿ ಪರಿಹಾರ ನೀಡಲಿದೆ.
ಈ ವಿಷಯವನ್ನು ಸುದ್ದಿಗಾರರಿಗೆ ತಿಳಿಸಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಸಿಎಂ ಬಸವರಾಜ್ ಬೊಮ್ಮಾಯಿ ಹರ್ಷ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ ಎಂದರು.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮಾ.6 ರಂದು ಭಾನುವಾರ ಹರ್ಷ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಲಿದ್ದಾರೆ. ಈ ಸಂದರ್ಭದಲ್ಲಿ ಸರ್ಕಾರದಿಂದ 25 ಲಕ್ಷ ರೂಪಾಯಿ ಪರಿಹಾರ ಮೊತ್ತವನ್ನು ಹಸ್ತಾಂತರ ಮಾಡಲಿದ್ದಾರೆ.
2015 ಕೊಲೆಯಾದ ಹಿಂದೂ ಕಾರ್ಯಕರ್ತರ ವಿಶ್ವನಾಥ್ ಶೆಟ್ಟಿಗೆ 18 ಲಕ್ಷ ರೂಪಾಯಿ ಪರಿಹಾರ ಆತನ ಎರಡನೇ ಹೆಂಡತಿ ಮತ್ತು ತಂದೆಗೆ ನೀಡಲಾಗಿತ್ತು.
ಪತ್ನಿಯು ತಂದೆ-ತಾಯಿ ಬಿಟ್ಟು ಹೋಗಿದ್ದಾಳೆ. ಈಗ ವಿಶ್ವನಾಥ್ ತಾಯಿ ಮಾತ್ರ ಬದುಕಿದ್ದಾರೆ. ಈಗ ವಿಶ್ವನಾಥ್ ಕುಟುಂಬಕ್ಕೆ ಕಾಂಗ್ರೆಸ್ ಸಾಂತ್ವನ ಹೇಳುತ್ತಿರುವುದು ಅಚ್ಚರಿ ಮೂಡಿಸಿದೆ.
ಅಂದಿನ ಕಾಂಗ್ರೆಸ್ ಸರ್ಕಾರ ಆತನ ಕುಟುಂಬಕ್ಕೆ ಪರಿಹಾರ ನೀಡಿಲ್ಲ. ಈಗ ವಿಶ್ವನಾಥ್ ತಾಯಿಗೆ ಬಿಜೆಪಿ ಮತ್ತು ಸಂಘ ಪರಿಹಾರ ಆರ್ಥಿಕ ಸಹಾಯ ಮಾಡಲಿದೆ ಎಂದರು.
ಕಾಂಗ್ರೆಸ್ ನಾಯಕರಾದ ಹರಿಪ್ರಸಾದ್ ಮತ್ತು ಸಿ.ಎಂ.ಇಬ್ರಾಹಿಂ ವಿರುದ್ಧವೂ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದು, ಹರ್ಷ ಕುಟುಂಬಕ್ಕೆ ಬಿಜೆಪಿ ಪಕ್ಷದ ಟಿಕೆಟ್ ಕುರಿತು ಮಾತನಾಡಲು ಇವರು ಯಾರು..? ಮೊದಲು 224 ಕ್ಷೇತ್ರದಲ್ಲಿ ಯಾವುದಾದರೊಂದು ಕಡೆ ಟಿಕೆಟ್ ಪಡೆದು ಇಬ್ಬರು ಸ್ಪರ್ಧೆ ಮಾಡಲಿ.
ಇಬ್ಬರು ಹಿಂಬಾಗಿಲ ರಾಜಕಾರಣ ಮಾಡುತ್ತಿದ್ದಾರೆ. ಇವರಿಗೆ ಚುನಾವಣೆಯಲ್ಲಿ ಗೆದ್ದು ಬರುವ ಸಾಮರ್ಥ್ಯವಿಲ್ಲ. ಇಂತವರು ಬಿಜೆಪಿ ಟಿಕೆಟ್ ಕುರಿತು ಮಾತನಾಡುತ್ತಿರುವುದು ಹಾಸ್ಯಾಸ್ಪದ ಎಂದು ಹೇಳಿದರು.
- ಚನ್ನಪಟ್ಟಣ: 4 ನೇ ಸುತ್ತಿನಲ್ಲಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
More Stories
ಚನ್ನಪಟ್ಟಣ: 4 ನೇ ಸುತ್ತಿನಲ್ಲಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ