ಪ್ಯಾಲೆಸ್ತೀನ್‌ನಲ್ಲಿದ್ದ ಭಾರತೀಯ ರಾಯಭಾರಿ ಮುಕುಲ್ ಆರ್ಯ ಅವರು ರಾಮಲ್ಲಾದಲ್ಲಿರುವ ರಾಯಭಾರ ಕಚೇರಿಯಲ್ಲಿ ಭಾನುವಾರ ನಿಗೂಢವಾಗಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.
ಆರ್ಯ ರಾಯಭಾರ ಕಚೇರಿಯೊಳಗೆ ನಿಗೂಢವಾಗಿ ಶವವಾಗಿ ಪತ್ತೆಯಾಗಿದ್ದಾರೆ.
ಅವರ ಸಾವಿನ ಬಗ್ಗೆ ಪ್ಯಾಲೇಸ್ಟಿನಿಯನ್ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ ಪ್ಯಾಲೆಸ್ಟೈನ್ ಮಾಧ್ಯಮಗಳು ವರದಿ ಮಾಡಿವೆ.
ಆರ್ಯ ನಿಧನಕ್ಕೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಟ್ವೀಟ್ ಮೂಲಕ ಆಘಾತ ವ್ಯಕ್ತಪಡಿಸಿದ್ದಾರೆ. “ರಾಮಲ್ಲಾದಲ್ಲಿ ಭಾರತದ ಪ್ರತಿನಿಧಿಯಾದ ಮುಕುಲ್ ಆರ್ಯ ನಿಧನದ ಬಗ್ಗೆ ತಿಳಿದು ತೀವ್ರ ಆಘಾತವಾಗಿದೆ. ಅವರು ಪ್ರತಿಭಾವಂತ ಅಧಿಕಾರಿಯಾಗಿದ್ದರು” ಎಂದು ಹೇಳಿದ್ದಾರೆ
2008ನೇ ಬ್ಯಾಚಿನ ಐಎಫ್‌ಎಸ್ ಅಧಿಕಾರಿಯಾಗಿದ್ದ ಆರ್ಯ ವಿದೇಶಾಂಗ ವ್ಯವಹಾರ ಸಚಿವಾಲಯದ ಅಧಿಕಾರಿಯಾಗಿ, ಯುನೆಸ್ಕೋ ಭಾರತ ನಿಯೋಗದ ಕಾಯಂ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ