ಪಂಜಾಬ್ ( Punjab)ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ, ಭರ್ಜರಿ ಗೆಲುವಿನತ್ತ ದಾಪುಗಾಲು ಇಡುತ್ತಿದೆ.
ಪಕ್ಷದ ಕಾರ್ಯಕರ್ತರಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ಆಪ್ನ ಗೆಲುವು ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗಿದೆ ಪುಟಾಣಿ ಬಾಲಕನೊಬ್ಬ ಭಾರೀ ಗಮನ ಸೆಳೆಯುತ್ತಿದ್ದಾನೆ.
ಆಪ್ ಬೆಂಬಲಿತ ಈ ಬಾಲಕ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ನಂತೆ ಡ್ರೆಸ್ ತೊಟ್ಟು ಮಿಂಚುತ್ತಿದ್ದಾನೆ.
ಸದ್ಯ ಸೋಶಿಯ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಫೋಟೋ ಭಾರೀ ಮೆಚ್ಚುಗೆ ಪಡೆದುಕೊಳ್ಳುತ್ತಿದೆ.
ಪಂಜಾಬ್ನ 117 ವಿಧಾನಸಭಾ ಕ್ಷೇತ್ರಗಳ ಪೈಕಿಯಲ್ಲಿ ಆಪ್ 90 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.ಕಾಂಗ್ರೆಸ್ 14, ಬಿಜೆಪಿ 4 ಕ್ಷೇತ್ರಗಳಲ್ಲಿ ಹಾಗೂ ಇತರೆ ಒಂದು ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.
ಸಿಎಂ ಅರವಿಂದ್ ಕೇಜ್ರಿವಾಲ್ ಈಗಾಗಲೇ ಪಂಜಾಬ್ಗೆ ಸಿಎಂ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದಾರೆ. ಅದರಂತೆ ಭಗವಂತ್ ಮನ್ ಸಿಎಂ ಆಗಲಿದ್ದಾರೆ.