ನಟಿ, ಮಾಡೆಲ್, ಕಾಂಗ್ರೆಸ್ ಅಭ್ಯಥಿ೯ ಅರ್ಚನಾ ಗೌತಮ್ (Archana Gautam) ಸೋಲನ್ನು ಅನುಭವಿಸಿದ್ದಾರೆ.
ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮೀರತ್ನ ಹಸ್ತಿನಾಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ಮಾಡೆಲ್ ಕಮ್ ರಾಜಕಾರಣಿ ಅರ್ಚನಾ ಗೌತಮ್ 1133 ಮತಗಳನ್ನು ಪಡೆದುಕೊಂಡು ಹೀನಾಯ ಸೋಲನ್ನು ಅನುಭವಿಸಿದ್ದಾರೆ.
ಭಾರತೀಯ ಜನತಾ ಪಕ್ಷದ ದಿನೇಶ್ ಖಟಿಕ್ 81959 ಮತಗಳನ್ನು ಪಡೆದುಕೊಂಡು ಗೆಲುವು ಸಾಧಿಸಿದ್ದಾರೆ.
ಚುನಾವಣಾ ಅಭ್ಯರ್ಥಿ ಎಂದು ಸುದ್ದಿಯಾದಾಗಿನಿಂದಲೂ ಮಿಸ್ ಬಿಕಿನಿ ಇಂಡಿಯಾ ವಿಜೇತೆಯಾಗಿದ್ದ ಅರ್ಚನಾ ಗೌತಮ್ ಅವರ ಬಿಕಿನಿ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಭಾರೀ ಚರ್ಚೆಗೆ ಕಾರಣವಾಗಿತ್ತು.
ಈ ಕುರಿತಂತೆ ಮಾತನಾಡಿದ ಅರ್ಚನಾ ಗೌತಮ್, ನಾನು ಮಿಸ್ ಬಿಕಿನಿ ಸ್ಪರ್ಧೆಯಲ್ಲಿ 2018ರಲ್ಲಿ ಭಾರತವನ್ನು ಪ್ರತಿನಿಧಿಸಿದ್ದೇನೆ. ನಾನು 2014ರಲ್ಲಿ ಮಿಸ್ ಉತ್ತರ ಪ್ರದೇಶ ಮತ್ತು 2018ರಲ್ಲಿ ಮಿಸ್ ಕಾಸ್ಮೊ ವಲ್ರ್ಡ್ ಆಗಿದ್ದೆ. ನನ್ನ ರಾಜಕೀಯ ವೃತ್ತಿಜೀವನದೊಂದಿಗೆ ನನ್ನ ವೃತ್ತಿಯನ್ನು ಒಂದೇ ಎಂದು ನೋಡಬೇಡಿ ಎಂದು ನಾನು ಜನರನ್ನು ವಿನಂತಿಸುತ್ತೇನೆ ಎಂದು ಈ ಹಿಂದೆ ಹೇಳಿದ್ದರು.
- SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ
- ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು
- ಪ್ರೀತಿಯೆಂದರೆ…. ಇಷ್ಟೇನಾ
- 2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ
- ಅಧಿಕೃತವಾಗಿ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಅಮಾನತು
- ನಾಳೆಯಿಂದ 14 ಕ್ಷೇತ್ರಗಳಲ್ಲಿ 2ನೇ ಹಂತದ ಅಂಚೆ ಮತದಾನ
- SSLC ಪರೀಕ್ಷೆ : ಮೇ.10ರಂದು ಫಲಿತಾಂಶ ಪ್ರಕಟ