ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿದ ಪರಿಣಾಮ ಕಾಫಿ ತೋಟದ ಇಬ್ಬರು ಕೆಲಸಗಾರರು ಸ್ಥಳದಲ್ಲೇ ಸಾವಿಗೀಡಾಗಿದ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕಡೆಗರ್ಜೆ ಗ್ರಾಮದಲ್ಲಿ ನಡೆದಿದೆ.
ಚಿಕ್ಕಯ್ಯ(60), ಚಿಕ್ಕಯ್ಯ(50) ಕಾಡಾನೆ ದಾಳಿಗೆ ಬಲಿಯಾದ ಮೃತ ದುರ್ದೈವಿಗಳು.
ಕಾಫಿ ತೋಟದಲ್ಲಿ ಇಬ್ಬರು ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಕೆಲಸಗಾರರ ಮೇಲೆ ದಾಳಿ ಮಾಡಿರುವ ಕಾಡಾನೆ ಸೊಂಡಲಿನಿಂದ ತಿವಿದು, ತುಳಿದ ಕಾರಣ ಇಬ್ಬರು ಸ್ಥಳದಲ್ಲೇ ಪ್ರಾಣತೆತ್ತಿದ್ದಾರೆ.
ಕಾಡಾನೆ ದಾಳಿಗೆ ಇಬ್ಬರು ಬಲಿಯಾದ ಕಾರಣ ನೂರಾರು ಮಹಿಳೆಯರು ಹಾಗೂ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.
ಸ್ಥಳಕ್ಕೆ ಅರಣ್ಯ ಸಚಿವರು, ಶಾಸಕರು ಬರುವವರೆಗೂ ಶವಗಳನ್ನು ಕೊಂಡೊಯ್ಯಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಅರೇ ಹಳ್ಳಿ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
- ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
- 104ರನ್ಗೆ ಆಸ್ಟ್ರೇಲಿಯಾ ಆಲೌಟ್ ,ಬುಮ್ರಾಗೆ 5 ವಿಕೆಟ್
More Stories
ಹಾಸನ: ನಕಲಿ ಆಧಾರ್ ಕಾರ್ಡ್ ಬಳಸಿ ಅಕ್ರಮವಾಗಿ ವಾಸಿಸುತ್ತಿದ್ದ 3 ಬಾಂಗ್ಲಾದೇಶ ಪ್ರಜೆಗಳು ಬಂಧನ
10 ವರ್ಷದ ಬಾಲಕ ಹೃದಯಘಾತದಿಂದ ಸಾವು
ಪತ್ನಿಗೆ ಚಾಕು ಇರಿದ ಪೊಲೀಸ್ ಕಾನ್ಸ್ ಟೇಬಲ್