January 29, 2026

Newsnap Kannada

The World at your finger tips!

WhatsApp Image 2022 03 14 at 10.51.48 AM

ಬೆಂಗಳೂರಲ್ಲಿ ಜಲಮಂಡಳಿ ಅಗೆದಿದ್ದ ಗುಂಡಿಗೆ ಬೈಕ್ ಸವಾರ ಬಲಿ

Spread the love

ಬೆಂಗಳೂರಿನ ಜಲಮಂಡಳಿಯಿಂದ ಅಗೆದಿದ್ದ ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಎಂಎಸ್ ಪಾಳ್ಯದ ಮುನೇಶ್ವರ ಲೇಔಟ್ ಕಡೆ ಹೋಗುವ ರಸ್ತೆಯಲ್ಲಿ ನಡೆದಿದೆ.

ಹಾವೇರಿ ಮೂಲದ ಅಶ್ವಿನ್( 27 )ಮೃತ ದುರ್ದೈವಿ.

ಈ ಘಟನೆಗೆ ಬಿಬಿಎಂಪಿ, ಜಲಮಂಡಳಿಯ ನಿರ್ಲಕ್ಷ್ಯವೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿನ್ನೆ ರಾತ್ರಿ ದುರ್ಘಟನೆ ನಡೆದಿದೆ

ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಫಲಕಾರಿಯಾಗದೇ ಬೆಳಗಿನ ಜಾವ ಸಾವನ್ನಪ್ಪಿದ್ದಾನೆ

ಅಶ್ವಿನ್ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಹಾವೇರಿ ಮೂಲದ ಅಶ್ವಿನ್, ತಾಯಿಗೆ ಒಬ್ಬನೇ ಮಗನಾಗಿದ್ದ. ರಕ್ತದ ಮಡುವಿನಲ್ಲಿ ಬಿದ್ದು, ಒದ್ದಾಡುತ್ತಿದ್ದರೂ ಸ್ಥಳಕ್ಕೆ ಆ್ಯಂಬುಲೆನ್ಸ್​ ಬರಲಿಲ್ಲ. ಒಂದು ಗಂಟೆಯಿಂದ ಕಾಲ್ ಮಾಡಿದರೂ ಸ್ಥಳಕ್ಕೆ ಆ್ಯಂಬುಲೆನ್ಸ್ ಬಂದಿರಲಿಲ್ಲ. ನಂತರ ಸ್ಥಳೀಯರೇ ಕಾರಿನಲ್ಲಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ.

error: Content is protected !!