ಕನ್ನಡದ ಹಿರಿಯ ನಿರ್ದೇಶಕ ಎಸ್. ನಾರಾಯಣ್ ಕಾಂಗ್ರೆಸ್ ಪಕ್ಷವನ್ನು ಬುಧವಾರ ಅಧಿಕೃತವಾಗಿ ಸೇರ್ಪಡೆಯಾದರು. ಕಾಂಗ್ರೆಸ್ ಪಕ್ಷದ ಬಾವುಟ ಹಿಡಿದು ಪಕ್ಷ ಸೇರಿದ ಎಸ್. ನಾರಾಯಣ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬರಮಾಡಿಕೊಂಡರು.
ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಮಾತಾಡಿದ ಎಸ್. ನಾರಾಯಣ್, ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುವ ಭರವಸೆ ನೀಡಿದ್ದಾರೆ 2023ಕ್ಕೆ ಕರ್ನಾಟಕದಲ್ಲಿ ಕಾಂಗ್ರೆಸ್ ಕರ್ನಾಟಕ ಎಂದು ಘೋಷಣೆ ಕೂಗಿದರು.
ನನಗೆ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ. 2023 ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರೋದೆ ನಮ್ಮ ಗುರಿ. ಇದಕ್ಕಾಗಿ ಹಗಲು ರಾತ್ರಿಯೆನ್ನದೇ ಶ್ರಮಿಸಲು ಸಿದ್ಧನಿದ್ದೇನೆ ಎಂದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು