ದಿ ಕಾಶ್ಮೀರ್ ಫೈಲ್ಸ್ ಹಾಗೂ ಜೇಮ್ಸ್ ನಡುವೆ ಹೋಲಿಕೆ ಮಾಡಿ ತಂದು ಹಾಕುವುದು ಬೇಡ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮನವಿ ಮಾಡಿದರು.
ದಿ ಕಾಶ್ಮೀರ ಫೈಲ್ಸ್ ಹಿಂದಿ ಚಿತ್ರಕ್ಕೆ ತೆರಿಗೆ ವಿನಾಯತಿ ಮಾಡಿದ ರೀತಿಯಲ್ಲೇ ಜೇಮ್ಸ್ ಚಿತ್ರಕ್ಕೂ ತೆರಿಗೆ ವಿನಾಯಿತಿ ಮಾಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಒತ್ತಾಯಕ್ಕೆ ಸಿ ಟಿ ರವಿ ಪ್ರತಿಕ್ರಿಯೆ ನೀಡಿದರು
ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಶ್ಮೀರ ಫೈಲ್ ಸಿನಿಮಾವು ಸತ್ಯಾಂಶಗಳ ಮೇಲೆ ತೆಗೆದಿರುವ ಸಿನಿಮಾವಾಗಿದೆ. ಇದು ಸಹ ಸಂದೇಶ ಇರುವ ಸಿನಿಮಾ ಇದಕ್ಕೂ ಸಹ ತೆರಿಗೆ ವಿನಾಯಿತಿ ಕೊಡಲಿ, ಆದರೆ ಎರಡು ಸಿನಿಮಾಗಳನ್ನು ಹೋಲಿಕೆ ಮಾಡುವುದು ಬೇಡ ಎಂದರು.
ಪುನೀತ್ ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಸಂಭ್ರಮಿಸಿ ಕುಣಿದಾಡಬೇಕಿದ್ದ ಅಭಿಮಾನಿಗಳು ದುಃಖದಲ್ಲಿ ಅವರ ಹುಟ್ಟು ಹಬ್ಬ ಆಚರಿಸಿಕೊಳ್ಳಬೇಕಿದೆ. ಪುನೀತ್ ರಾಜಕುಮಾರ್ ಒಬ್ಬ ಮಾದರಿ ವ್ಯಕ್ತಿ. ಅವರ ನಡೆಯನ್ನು ಅಭಿಮಾನಿಗಳು ಅನುಸರಿಸಿದರೆ ಅದೇ ನಾವು ಅವರಿಗೆ ಕೊಡುವ ಗೌರವ ಅವರ ನಡೆಯಲ್ಲಿ ನಾವೆಲ್ಲಾ ನಡೆಯಬೇಕಿದೆ. ಕಾಶ್ಮೀರ ಫೈಲ್ ರೀತಿ ತೆರಿಗೆ ವಿನಾಯಿತಿ ಕೊಡುವ ವಿಚಾರ ಎರಡು ಸಿನಿಮಾಗಳಿಗೆ ತಂದು ಹಾಕುವ ಕೆಲಸ ಬೇಡ ಎಂದು ತಿಳಿಸಿದರು.
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
- ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
More Stories
ಬಿಗ್ ಬಾಸ್ ತೆಲುಗು ಗೆದ್ದ ಮೈಸೂರಿನ ನಿಖಿಲ್ ಮಳಿಯಕ್ಕಲ್
ವಿಶ್ವದಾಖಲೆ ತಬಲಾ ವಾದಕ ಉಸ್ತಾದ್ ಜಾಕಿರ್ ಹುಸೇನ್ ವಿಧಿವಶ
ಕಾಲ್ತುಳಿತದಲ್ಲಿ ಮಹಿಳೆ ಸಾವು: ನಟ ಅಲ್ಲು ಅರ್ಜುನ್ ಬಂಧನ