December 19, 2024

Newsnap Kannada

The World at your finger tips!

WhatsApp Image 2022 03 18 at 9.23.49 AM

ಸರ್ಕಾರಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ZP C.E.O – ಮಾದರಿಯಾದ IAS ಅಧಿಕಾರಿ

Spread the love

ಓರ್ವ ಮಹಿಳಾ ಐಎಎಸ್​​ (IAS) ಅಧಿಕಾರಿ ಜನರಿಗೆ ಸರ್ಕಾರಿ ಆಸ್ಪತ್ರೆಯ ಮೇಲೆ ವಿಶ್ವಾಸ ಮೂಡಿಸುವ ಸಲುವಾಗಿ ಬಳ್ಳಾರಿಯಲ್ಲಿ ಸಕಾ೯ರಿ ಆಸ್ಪತ್ರೆಯಲ್ಲೇ ಹೆರಿಗೆ ಮಾಡಿಸಿಕೊಂಡು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ

ತನಗೆ ಹುಟ್ಟುವ ಮಗು ಖಾಸಗಿ ಆಸ್ಪತ್ರೆಯಲ್ಲಿ ಅಲ್ಲದೇ ಸರ್ಕಾರಿ ಆಸ್ಪತ್ರೆಯಲ್ಲಿ ಹುಟ್ಟಬೇಕು ಎಂದು ನಿರ್ಧರಿಸಿದ್ದರು.

ಈ ಆಶಯದ ಮೇರೆಗೆ ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ ಬಳ್ಳಾರಿಯ ZP CEO ಕೆ.ಆರ್.ನಂದಿನಿ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಂಡು ಮಾದರಿಯಾಗಿದ್ದಾರೆ.

ನಾರ್ಮಲ್ ಹೆರಿಗೆ ಮೂಲಕ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!