ಬಾಲಿವುಡ್ ನಲ್ಲಿ ಸಂಚಲನ ಮೂಡಿಸಿರುವ ‘ ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಕನ್ನಡಕ್ಕೆ ಡಬ್ ಮಾಡಲು ಬಿಜೆಪಿ ಚಿಂತನೆ ನಡೆಸಿದೆ.
ಕನ್ನಡ ಅವತರಣಿಕೆಯನ್ನು ರೆಡಿ ಮಾಡಿಸಿ, ಜನರಿಗೆ ತೋರಿಸುವ ಪ್ಲ್ಯಾನ್ ಕುರಿತು ಸಿ.ಎಂ ಬಸವರಾಜ ಬೊಮ್ಮಾಯಿ ಆಪ್ತ ಸಚಿವರ ಜತೆ ಮಾತನಾಡಿದ್ದಾರೆ ಎನ್ನಲಾಗಿದೆ.
ಈಗಾಗಲೇ ಸಚಿವ ಸಂಪುಟದ ಸಹೋದ್ಯೋಗಿಗಳ ಜತೆ ಸಿನಿಮಾ ನೋಡಿರುವ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ಸದಸ್ಯರಿಗೂ ಸಿನಿಮಾ ನೋಡುವಂತೆ ಮನವಿ ಮಾಡಿದ್ದರು. ಅಲ್ಲದೇ, ವಿಧಾನ ಸಭೆ ಮತ್ತು ವಿಧಾನ ಪರಿಷತ್ ನಲ್ಲೂ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನೋಡುವಂತೆ ಮನವಿ ಕೂಡ ಮಾಡಿಕೊಳ್ಳಲಾಗಿತ್ತು.
ಈಗ ಕರ್ನಾಟಕದ ಜನತೆಗೆ ಆ ಸಿನಿಮಾವನ್ನು ತೋರಿಸುವುದಕ್ಕಾಗಿ ಡಬ್ ಮಾಡುವ ಆಲೋಚನೆ ಮಾಡಿದೆಯಂತೆ ಕರ್ನಾಟಕದ ಭಾರತೀಯ ಜನತಾ ಪಕ್ಷ.
ಕರ್ನಾಟಕ ಸರಕಾರ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೆ ಮನರಂಜನಾ ತೆರಿಗೆಯನ್ನು ತಗೆದುಕೊಳ್ಳುತ್ತಿಲ್ಲ. ಅಲ್ಲದೇ, ಸಿನಿಮಾ ನೋಡುವಂತೆ ಪ್ರೇರೇಪಿಸುವ ಮಾತುಗಳನ್ನೂ ಆಡುತ್ತಿದೆ. ಕೆಲ ಸಚಿವರು ಮತ್ತು ಜನಪ್ರತಿನಿಧಿಗಳು ಆಯಾ ಕ್ಷೇತ್ರದಲ್ಲಿ ಈ ಸಿನಿಮಾವನ್ನು ಉಚಿತವಾಗಿ ತೋರಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲರೂ ಸಿನಿಮಾ ನೋಡಬೇಕು ಎನ್ನುವ ಉದ್ದೇಶ ಬಿಜೆಪಿಯದ್ದಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ
ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್ ದರ ನಿಯಂತ್ರಣದ ಚಿಂತನೆ: ಗೃಹ ಸಚಿವ ಜಿ. ಪರಮೇಶ್ವರ್